ಕಳೆದ ಆರು ತಿಂಗಳಿಂದ ಸ್ಟಾರ್ ನಟರ ಸಿನಿಮಾಗಳು ರಿಲೀಸ್ ಆಗಿಲ್ಲ. ಕರುನಾಡ ಚಕ್ರವರ್ತಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ ಅಭಿನಯದ ಟಗರು ಸಿನಿಮಾ ಹೊರತುಪಡಿಸಿ ಬಾಕ್ಸ್ ಆಫೀಸ್ ದೂಳೆಬ್ಬಿಸುವ ಸ್ಟಾರ್ ಗಳ ಸಿನಿಮಾ ಬಿಡುಗಡೆ ಆಗಿಲ್ಲ…!
ಆಷಾಡ ಕಳೆಯುತ್ತಿದ್ದಂತೆ ಶ್ರಾವಣ ಬರಲಿದೆ.ಶ್ರಾವಣ ಮಾಸದಿಂದ ಸ್ಯಾಂಡಲ್ ವುಡ್ ನ ಸ್ಟಾರ್ ನಟರ ಸಿನಿಮಾಗಳು ಸಾಲು ಸಾಲಾಗಿ ರಿಲೀಸ್ ಆಗಲಿವೆ.
ರಿಲೀಸ್ ಆಗಲಿರುವ ಸಿನಿಮಾಗಳ ಒಟ್ಟು ಬಜೆಟ್ ಸುಮಾರು 150ಕೋಟಿ ರೂ. ಈ ಸಿನಿಮಾಗಳಿಂದ ಏನಿಲ್ಲ ಅಂದರೂ 250ಕೋಟಿ ಗಳಿಕೆ ಆಗುವ ನಿರೀಕ್ಷೆ ಇದೆ.
ಸ್ಟಾರ್ ವಾರ್ ಶುರುವಾಗಲಿದ್ದು, ಈ ವರ್ಷದ ಕೊನೆಯಲ್ಲಿ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಕೆಜಿಎಫ್’ ರಿಲೀಸ್ ಆಗುವ ಸಾಧ್ಯತೆ ಇದೆ. ಯಶ್ ಸಿನಿಮಾ ಬರದೆ ಎರಡು ವರ್ಷ ಕಳೆದಿದೆ. ಅಭಿಮಾನಿಗಳು ಕೆಜಿಎಫ್ ಗೆ ಕಾದಿದ್ದಾರೆ. ಕರುನಾಡ ಚಕ್ರವರ್ತಿ ಶಿವಣ್ಣ ಮತ್ತು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ‘ದಿ ವಿಲನ್’ ಸಿನಿಮಾ ಸೆಪ್ಟೆಂಬರ್ ನಲ್ಲಿ ತೆರೆಕಾಣ ಬಹುದು.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಕುರುಕ್ಷೇತ್ರ’ ಅಕ್ಟೋಬರ್ ನಲ್ಲಿ ರಿಲೀಸ್ ಆಗುವ ನಿರೀಕ್ಷೆಯಿದೆ.
ರೆಬಲ್ ಸ್ಟಾರ್ ಅಂಬರೀಶ್ , ಸುದೀಪ್ ಅಭಿನಯದ ‘ಅಂಬಿ ನಿಂಗೆ ವಯಸ್ಸಾಯ್ತೋ’ ಚಿತ್ರ ಈ ತಿಂಗಳೇ ರಿಲೀಸ್ ಆಗಬಹುದು.
ಇವುಗಳಲ್ಲದೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ‘ನಟ ಸಾರ್ವಭೌಮ’, ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ‘ಆರೆಂಜ್’ ಸಿನಿಮಾ ಸಹ ಸರದಿಯಲ್ಲಿದೆ.