No menu items!
21.2 C
Munich
Wednesday, July 8, 2026

ನನ್ನ ಆತ್ಮಸಾಕ್ಷಿಯಂತೆ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ್ದೇನೆ: ಎಸ್.ಟಿ. ಸೋಮಶೇಖರ್ ಸ್ಪಷ್ಟನೆ

Must read

ನನ್ನ ಆತ್ಮಸಾಕ್ಷಿಯಂತೆ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ್ದೇನೆ: ಎಸ್.ಟಿ. ಸೋಮಶೇಖರ್ ಸ್ಪಷ್ಟನೆ

ಬೆಂಗಳೂರು: ವಿಧಾನಪರಿಷತ್ನ ಏಳು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ಕಾಂಗ್ರೆಸ್ ಅಭ್ಯರ್ಥಿ ಪರ ಮತ ಚಲಾಯಿಸಿರುವುದಾಗಿ ಬಹಿರಂಗವಾಗಿ ಹೇಳಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
ವಿಧಾನಸೌಧದಲ್ಲಿ ನಡೆದ ಮತದಾನದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸೋಮಶೇಖರ್, ತಾವು ಆತ್ಮಸಾಕ್ಷಿಯಂತೆ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿರುವುದಾಗಿ ತಿಳಿಸಿದ್ದಾರೆ.
“ಬಿಜೆಪಿ ಅಥವಾ ಜೆಡಿಎಸ್ ನಾಯಕರು ಮತದಾನದ ಕುರಿತು ನನ್ನನ್ನು ಸಂಪರ್ಕಿಸಲಿಲ್ಲ. ಆದರೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ಮಾಡಿ ಭೇಟಿಗೆ ಆಹ್ವಾನಿಸಿದ್ದರು. ಆ ವೇಳೆ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವಂತೆ ಮನವಿ ಮಾಡಿದರು” ಎಂದು ಹೇಳಿದರು.
“ನನ್ನ ಕ್ಷೇತ್ರದಲ್ಲಿ ಇರುವ ಹಲವು ಸಮಸ್ಯೆಗಳು ಹಾಗೂ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೆ. ಕ್ಷೇತ್ರದ ಸಮಸ್ಯೆಗಳನ್ನು ಪರಿಹರಿಸಿದರೆ ನಾನು ಆತ್ಮಸಾಕ್ಷಿಯಂತೆ ಮತ ಚಲಾಯಿಸುವುದಾಗಿ ತಿಳಿಸಿದ್ದೆ. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಹಂತ ಹಂತವಾಗಿ ಕ್ಷೇತ್ರದ ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿದರು” ಎಂದು ವಿವರಿಸಿದರು. ಈ ಭರವಸೆಯ ಹಿನ್ನೆಲೆಯಲ್ಲಿ ತಾವು ಕಾಂಗ್ರೆಸ್ ಅಭ್ಯರ್ಥಿ ಪರ ಮತ ಚಲಾಯಿಸಿದ್ದೇನೆ ಎಂದು ಸೋಮಶೇಖರ್ ಸ್ಪಷ್ಟಪಡಿಸಿದರು.

- Advertisement -spot_img

More articles

- Advertisement -spot_img

Latest article