ಸಾಹಿತ್ಯ ಕೃಷಿಕ ಈ ಉಪನ್ಯಾಸಕ…! ಇವರ ಪರಿಚಯ ನಿಮಗಿದ್ಯಾ…?

Date:

ಡಾ.ಎಂ ಸುಬ್ರಹ್ಮಣ್ಯ ಸಾಹಿತ್ಯ ಕೃಷಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರೋ ಉಪನ್ಯಾಸಕರು.

ಇವರ ತಂದೆ ಸಿ.ಡಿ ಮುನಿರಾಮಯ್ಯ, ತಾಯಿ ಲಕ್ಷ್ಮೀದೇವಮ್ಮ. ಮೂಲತಃ ತುಮಕೂರಿನವರು. ಸುಬ್ರಹ್ಮಣ್ಯ ಅವರು ಹುಟ್ಟಿ ಬೆಳೆದಿದ್ದು ದೊಡ್ಡಬಳ್ಳಾಪುರದಲ್ಲಿ. ಶಿವಮೊಗ್ಗದ ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ಬಿ.ಎಸ್ಸಿ ಪದವಿ, ಮೈಸೂರು ವಿವಿ ಮಾನಸ ಗಂಗೋತ್ರಿಯಲ್ಲಿ ಸಸ್ಯಶಾಸ್ತ್ರ ವಿಷಯದಲ್ಲಿ ಎಂಎಸ್ಸಿ ಹಾಗೂ ಮಂಗಳೂರು ವಿವಿ ಮಂಗಳ ಗಂಗೋತ್ರಿಯಲ್ಲಿ ಅನ್ವಯಿಕ ಸಸ್ಯಶಾಸ್ತ್ರದಲ್ಲಿ ಎಂ.ಫಿಲ್ ಪದವಿ ಪಡೆದಿದ್ದಾರೆ.


ಬೆಂಗಳೂರಿನ ಯಲಹಂಕ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜೀವಶಾಸ್ತ್ರ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಇವರು ಬರಹಗಾರರು ಕೂಡ ಹೌದು. ಪದವಿ ಪೂರ್ವ ತರಗತಿಗಳಿಗೆ ಜೀವಶಾಸ್ತ್ರ ಪುಸ್ತಕಗಳನ್ನು ಬರೆದಿದ್ದಾರೆ. ಹತ್ತಾರು ಕತೆ, ಕವನ ಮತ್ತು ವೈಜ್ಞಾನಿಕ ಲೇಖನಗಳು ರಾಜ್ಯದ ವಿವಿಧ ದಿನಪತ್ರಿಕೆ, ವಾರಪತ್ರಿಕೆಗಳಲ್ಲಿ ಪ್ರಕಟವಾಗಿದೆ.


ಪದವಿ ಪೂರ್ವ ಶಿಕ್ಷಣ ಇಲಾಖೆಯ ಪಠ್ಯಪುಸ್ತಕ ಮಂಡಳಿಯಲ್ಲಿ ಸದಸ್ಯರಾಗಿ , ಹಂಪಿಯ ಕನ್ನಡ ವಿಶ್ವವಿದ್ಯಾಲಯದ (1995-96) ಪದವಿ ಪೂರ್ವ ತಗರತಿಗಳ ಜೀವಶಾಸ್ತ್ರ ಪಠ್ಯಪುಸ್ತಕಗಳ ಸಂಪಾದಕ ಮಂಡಳಿ ಸದಸ್ಯರಾಗಿ ಹಾಗೂ ಲೇಖಕರಾಗಿ ಕಾರ್ಯನಿರ್ವಹಿಸಿದ್ದಾರೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ‘ವಿಕಸನ’ ಕಾರ್ಯಕ್ರಮದಡಿಯಲ್ಲಿ ಜೀವಶಾಸ್ತ್ರಕ್ಕೆ ಸಂಬಂಧಿಸಿದ ಉಪನ್ಯಾಸಗಳು ಚಂದನ ವಾಹಿನಿಯಲ್ಲಿ ಪ್ರಸಾರವಾಗಿವೆ. ಇವರು ಡಿ.ಎಸ್. ಇಆರ್.ಟಿ ಯ ಹದಿಹರೆಯ ಕೋಶಕ್ಕೆ ಸಂಬಂಧಿಸಿದ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ, ‘ಜೀವನ ಕೌಶಲ್ಯ ಶಿಕ್ಷಣ’ (8, 9 ಮತ್ತು ಪ್ರಥಮ ಪಿಯುಸಿ) ಯೋಜನೆಯ ಮುಖ್ಯಸಂಪಾದಕರಾಗಿದ್ದಾರೆ. ಅಲ್ಲದೆ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಇಲಾಖೆ ನಡೆಸುವ ತರಬೇತಿ ಕಾರ್ಯಕ್ರಮಗಳಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸುತ್ತಿರುತ್ತಾರೆ. ತಮ್ಮ ಕಾಲೇಜಿನ ವಾರ್ಷಿಕ ಸಂಚಿಕೆ ‘ವಿಕಸನ’ದ ಸಂಪಾದಕರೂ ಸಹ ಆಗಿದ್ದಾರೆ.


ಇವರ ಸಾಧನೆ, ಸೃಜನಶೀಲತೆಯನ್ನು ಗುರುತಿಸಿ ಯೂನಿವರ್ಸಿಟಿ ಆಫ್ ಸೌತ್ ಅಮೆರಿಕಾ ವಿವಿ 2016ರಲ್ಲಿ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಇವರ ಶೈಕ್ಷಣಿಕ ಸೇವೆಯನ್ನು ಗುರುತಿಸಿ ಬೆಳಗಾವಿಯ ಎಸ್‍ಟಿಎಲ್ ಸಂಸ್ಥೆ 2008ರಲ್ಲಿ ‘ಗುರುತಿಲಕ’ ಬಿರುದು ನೀಡಿ, ಆದರ್ಶ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಿದೆ. ಬೆಂಗಳೂರಿನ ಪ್ರತಿಭಾ ಅಕಾಡೆಮಿ 2010ರಲ್ಲಿ ಡಾ.ಎಸ್ ರಾಧಾಕೃಷ್ಣನ್ ಸ್ಮರಣಾರ್ಥ ‘ಉತ್ತಮ ಶಿಕ್ಷಕ’ ಪ್ರಶಸ್ತಿ ನೀಡಿದೆ. ಇವರು ಶೈಕ್ಷಣಕ ಕ್ಷೇತ್ರದ ಸೇವೆಯನ್ನು ಕರ್ನಾಟಕ ರಾಜ್ಯ ಸರ್ಕಾರವೂ ಗುರುತಿಸಿದ್ದು, 2017-18ನೇ ಸಾಲಿನ ‘ರಾಜ್ಯಮಟ್ಟದ ಉತ್ತಮ ಉಪನ್ಯಾಸಕ ಪ್ರಶಸ್ತಿ’ ನೀಡಿ ಪುರಸ್ಕರಿಸಿರುವುದನ್ನು ಸಹ ಇಲ್ಲಿ ಸ್ಮರಿಸಬಹುದು.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...