ನಾಡಿನೆಲ್ಲೆಡೆ ಸಂಕ್ರಾಂತಿ ಸಂಭ್ರಮ ಮನೆ ಮಾಡಿದೆ. ಹಬ್ಬಕ್ಕೆ ಸ್ಟಾರ್ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಭರ್ಜರಿ ಗಿಫ್ಟ್ ಕೊಟ್ಟಿದ್ದಾರೆ. ಒಂದು ಕಾಲದ ಕುಚಿಕುಗಳು ಒಟ್ಟಿಗೇ ಅಭಿಮಾನಿಗಳಿಗೆ ಹಬ್ಬದ ಉಡುಗೊರೆ ನೀಡಿದ್ದು ವಿಶೇಷ.
ಕಿಚ್ಚ – ದಚ್ಚು ಅಭಿಮಾನಿಗಳಿಗೆ ಅದೆಂಥಾ ಗಿಫ್ಟ್ ಕೊಟ್ಟಿದ್ದಾರೆ ಎಂಬ ಕುತೂಹಲವೇ?
ಆ ಕುತೂಹಲಕ್ಕೆ ಇಲ್ಲಿದೆ ಉತ್ತರ. ಸುದೀಪ್ ಅವರ ಕೋಟಿಗೊಬ್ಬ 3 ಮತ್ತು ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ಬಗ್ಗೆ ನಿಮಗೆ ಗೊತ್ತಿದೆ. ಸಂಕ್ರಾಂತಿ ಹಬ್ಬದ ಪ್ರಯುಕ್ತ ಈ ಸಿನಿಮಾಗಳ ಮೋಷನ್ ಪೋಸ್ಟರ್ ರಿಲೀಸ್ ಆಗಿದೆ.
ಕೋಟಿಗೊಬ್ಬ -3 ಸಿನಿಮಾ ಮೋಷನ್ ಪೋಸ್ಟರ್ ಹಾಗೂ ರಾಬರ್ಟ್ ಸಿನಿಮಾದ ಸೆಕೆಂಡ್ ಲುಕ್ ಮೋಷನ್ ಪೋಸ್ಟರ್ ಸಂಕ್ರಾಂತಿಗೆ ಗಿಫ್ಟ್ ರೂಪದಲ್ಲಿ ಅಭಿಮಾನಿಗಳಿಗೆ ಸಿಕ್ಕಿದೆ.
ಕೋಟಿಗೊಬ್ಬ 3 ಶಿವಕಾರ್ತಿಕ್ ನಿರ್ದೇಶನದ ಸಿನಿಮಾ. ಈ ಸಿನಿಮಾದಲ್ಲಿ ಸುದೀಪ್ ಜೊತೆಗೆ ಮಡೋಣ ಸೆಬಾಸ್ಟಿನ್ ಮತ್ತು ಶ್ರದ್ಧಾ ದಾಸ್ ನಟಿಸಿದ್ದಾರೆ. ಸೂರಪ್ಪ ಬಾಬು ನಿರ್ಮಿಸಿದ್ದಾರೆ.
ರಾಬರ್ಟ್ಗೆ ತರುಣ್ ಸುಧೀರ್ ಆ್ಯಕ್ಷನ್ ಕಟ್ ಹೇಳಿದ್ದು, ಉಮಾಪತಿ ಬಂಡವಾಳ ಹೂಡಿದ್ದಾರೆ. ಆಶಾಭಟ್ ದರ್ಶನ್ಗೆ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಇನ್ನೂ ಈ ಎರಡೂ ಸಿನಿಮಾಕ್ಕೂ ಅರ್ಜುನ್ ಜನ್ಯಾ ಸಂಗೀತ ನೀಡಿದ್ದಾರೆ.