ಸಲ್ಮಾನ್ ಖಾನ್ ಜೊತೆ ‘ಟೈಗರ್ ಜಿಂದಾ ಹೈ’ ಚಿತ್ರದಲ್ಲಿ ನಟಿಸಿರುವ ದಕ್ಷಿಣ ಭಾರತದ ಸೂಪರ್ ಸ್ಟಾರ್, ಕನ್ನಡದ ಹೆಸರಾಂತ ನಟ ಅತಿ ಹೆಚ್ಚು ಸಂಭಾವನೆ ಪಡೆದಿರುವುದು ವರದಿಯಾಗಿದೆ.
ಟೈಗರ್ ಜಿಂದಾ ಹೈ ಚಿತ್ರದಲ್ಲಿ ವಿಲನ್ ಆಗಿ ನಟಿಸಿರುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅತಿಹೆಚ್ಚು ಸಂಭಾವನೆ ಪಡೆದಿರುವ ಕನ್ನಡದ ಸ್ಟಾರ್ ನಟ. ಈ ಚಿತ್ರದ ನಟನೆಗೆ ಕಿಚ್ಚ 6 ಕೋಟಿ ರೂ ಸಂಭಾವನೆ ಪಡೆದಿದ್ದಾರೆ ಎಂದು ಜೀ ನ್ಯೂಸ್ ವರದಿ ಮಾಡಿದೆ.
ಈ ಚಿತ್ರದಲ್ಲಿ ಪ್ರಕಾಶ್ ರೈ ಕೂಡ ಖಳನಟರಾಗಿ ನಟಿಸಿದ್ದು 2 ಕೋಟಿ ರೂ ಸಂಭಾವನೆ ಪಡೆದಿದ್ದಾರೆ ಎನ್ನಲಾಗಿದೆ. ಬಹುನಿರೀಕ್ಷಿತ ಈ ಚಿತ್ರ ಡಿಸೆಂಬರ್‍ನಲ್ಲಿ ಬಿಡುಗಡೆಯಾಗಲಿದೆ.