ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆ ಮಾಡಿದ್ದೇನು ?

Date:

ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆ ಮೂವರು ಮಕ್ಕಳಿಗೆ ವಿಷ ಉಣಿಸಿ ನೇಣಿಗೆ ಶರಣಾದ ಹೃದಯ ವಿದ್ರಾವಕ ಘಟನೆ ಮದ್ದೂರಿನ ಹೊಳೆಬೀದಿಯಲ್ಲಿ ನಡೆದಿದೆ. ಉಸ್ನಾ ಕೌಸರ್ ಆತ್ಮಹತ್ಯೆಗೆ ಶರಣಾದ ಮಹಿಳೆಯಾಗಿದ್ದು, ಹಾರಿಸ್, ಆಲಿಸಾ, ಅನಮ್ ಫಾತಿಮಾ ಮೃತ ಮಕ್ಕಳಾಗಿದ್ದಾರೆ.

ಗಂಡ ಅಖಿಲ್ ಅಹಮದ್ ಅಕ್ರಮ ಸಂಬಂಧಕ್ಕೆ ಬೇಸತ್ತ ಕೌಸರ್ ಈ ಕೃತ್ಯವೆಸಗಿದ್ದಾರೆ. ಚನ್ನಪಟ್ಟಣದಲ್ಲಿ ಕಾರ್ ಮೆಕಾನಿಕ್ ಆಗಿದ್ದ ಅಖಿಲ್ ಅಹಮದ್ ಪರ ಸ್ತ್ರೀ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ.

ಇದನ್ನು ಪ್ರಶ್ನೆ ಮಾಡಿದ್ದಕ್ಕೆ ಮನೆಯಲ್ಲಿ ಗಲಾಟೆ ನಡೆದಿದ್ದು, ಕೌಸರ್-ಅಖಿಲ್ ಇಬ್ಬರನ್ನ ಪೋಷಕರು ರಾಜಿ ಮಾಡಿದ್ರು. ನಿನ್ನೆ ಬೇಗ ಮನೆಗೆ ಬರುತ್ತೇನೆ ಎಂದು ಕೆಲಸಕ್ಕೆ‌ ಹೋಗಿದ್ದ ಅಖಿಲ್ ಸಂಜೆಯಾದ್ರು ಮನೆಗೆ ಬಾರದ ಹಿನ್ನೆಲೆ ಫೋನ್‌ನಲ್ಲಿ ಜಗಳವಾಗಿತ್ತು.

 

ಇದರಿಂದ ಬೇಸತ್ತ ಉಸ್ನಾ ಕೌಸರ್ ಮಕ್ಕಳಿಗೆ ವಿಷ ಹಾಕಿ, ನೇಣಿಗೆ ಶರಣಾಗಿದ್ದಾರೆ. ಇನ್ನ ಅಖಿಲ್ ತಮ್ಮ ಮಗಳನ್ನು ಕೊಲೆ ಮಾಡಿದ್ದಾನೆ ಎಂದು ಕೌಸರ್ ಪೋಷಕರು ಆರೋಪಿಸಿದ್ದು, ಸದ್ಯ ಅಖಿಲ್ ಅಹಮದ್ ಹಾಗೂ ಕುಟುಂಬಸ್ಥರು ನಾಪತ್ತೆ ಆಗಿದ್ದಾರೆ.

ಈ ಸಂಬಂಧ ಮದ್ದೂರು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .

Share post:

Subscribe

spot_imgspot_img

Popular

More like this
Related

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು: ಸಿಎಂ ಸಿದ್ದರಾಮಯ್ಯ

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ...

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ!

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ! ಬೆಂಗಳೂರು: ರಿಯಲ್...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ...