ಮುಂದಿನ ಆದೇಶ ನೀಡುವವರೆಗೂ ತಮಿಳುನಾಡಿಗೆ ಪ್ರತಿನಿತ್ಯ 2 ಸಾವಿರ ಕ್ಯೂಸೆಕ್ಸ್ ನೀರು ಬಿಡುವಂತೆ ಬುಧವಾರ ಸುಪ್ರೀಂಕೋರ್ಟ್‍ನ ತ್ರೀ ಸದಸ್ಯ ಪೀಠ ಮತ್ತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ. ಕಾವೇರಿ ನ್ಯಾಯಾಧೀಕರಣ ತೀರ್ಪನ್ನು ಪ್ರಶ್ನಿಸಿ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳು ಸೇರಿದಂತೆ ಒಟ್ಟು ನಾಲ್ಕು ರಾಜ್ಯಗಳು ಅರ್ಜಿ ಸಲ್ಲಿಸಿತ್ತು. ಮೇಲ್ಮನವಿ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ದೀಪಕ್ ಮಿಶ್ರ, ನ್ಯಾ. ಅಮಿತ್ ರಾವ್, ನ್ಯಾ. ಎಎಂ ಖಾನ್ವಿಕ್ಕರ್ ಅವರನ್ನೊಳಗೊಂಡ ತ್ರೀ ಸದಸ್ಯತ್ವ ಪೀಠವು ತಮಿಳುನಾಡಿಗೆ ನೀರು ಹರಿಸಲೇ ಬೇಕು ಎಂದು ಮತ್ತೆ ತಮಿಳುನಾಡು ಪರ ತೀರ್ಪು ನೀಡಿದೆ. ಮೇಲ್ಮನವಿ ಅರ್ಜಿಗೆ ಸಂಬಂಧಿಸಿದಂತೆ ಕರ್ನಾಟಕ ತಮಿಳುನಾಡು ಪುದುಚೇರಿ ಹಾಗೂ ಕೇರಳ ರಾಜ್ಯಗಳ ಪರ ವಕೀಲರ ವಾದ ಮಂಡನೆ ಮುಕ್ತಾಯವಾಗಿದ್ದು, ವಾದ ಪ್ರತಿವಾದ ಆಲಿಸಿದ ಬಳಿಕ ಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ. ಅಲ್ಲದೇ ಮುಂದಿನ ಆದೇಶ ನೀಡುವವರೆಗೂ ನೀರು ಬಿಡಬೇಕು ಎಂದು ಹೇಳಿದೆ.
Like us on Facebook The New India Times
POPULAR STORIES :
ಎಲ್ಲಾ ಮಾಧ್ಯಮಗಳಿಗೆ ರಾಕಿಂಗ್ ಸ್ಟಾರ್ ಓಪನ್ ಚಾಲೆಂಜ್..! #Video
ಆ್ಯಪಲ್ ಕಂಪನಿಯ ಸಂಸ್ಥಾಪಕ ಸ್ಟೀವ್ ಜಾಬ್ಸ್ ನ ಕೊನೆಯ ಪತ್ರ
ಅಸಲಿಗೆ ‘ಒಳ್ಳೆಯ ಹುಡುಗ’ನ ಹೆಸರು ಪ್ರಥಮ್ ಅಲ್ಲ..! ಮತ್ತೇನು?
ಮೊಬೈಲ್ ಚಾರ್ಜರನ್ನು ವೈರ್‍ಲೆಸ್ ಚಾರ್ಜರ್ ಆಗಿ ಮಾಡೋ ಸಿಂಪಲ್ ವಿಧಾನ..!