T20 WC: ಪ್ರಮುಖ ವೇಗಿ ಟೂರ್ನಿಯಿಂದಲೇ ಔಟ್

Date:

ಯುಎಇನಲ್ಲಿ 7ನೇ ಆವೃತ್ತಿಯ ಐಸಿಸಿ ಟಿ20 ವಿಶ್ವಕಪ್ (ICC T20 World Cup) ಕ್ರಿಕೆಟ್ ಟೂರ್ನಿ ಅದ್ಧೂರಿಯಾಗಿ ಸಾಗುತ್ತಿದೆ. ಸೂಪರ್ 12 ಹಂತದ ಪಂದ್ಯಗಳು ಸಾಕಷ್ಟು ರೋಚಕ ಪಪೋಟಿಗಳಿಗೆ ಸಾಕ್ಷಿಯಾಗಿದೆ. ಇದೀಗ ಚೊಚ್ಚಲ ಟಿ20 ವಿಶ್ವಕಪ್ ಗೆಲ್ಲುವ ಕನಸು ಕಾಣುತ್ತಿದ್ದ ನ್ಯೂಜಿಲೆಂಡ್ ಕ್ರಿಕೆಟ್ ತಂಡ (New Zealand Cricket ) ದ ಪಾಲಿಗೆ ಆಘಾತಕಾರಿಯಾದ ಸುದ್ದಿಯೊಂದು ಹೊರಬಿದ್ದಿದ್ದು, ತಂಡದ ಸ್ಟಾರ್ ವೇಗಿ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.

ಕೇನ್‌ ವಿಲಿಯಮ್ಸನ್‌ ನೇತೃತ್ವದ ನ್ಯೂಜಿಲೆಂಡ್ ಕ್ರಿಕೆಟ್ ತಂಡವು ಚೊಚ್ಚಲ ಬಾರಿಗೆ ಟಿ20 ವಿಶ್ವಕಪ್‌ ಗೆಲ್ಲುವ ಕನಸಿನೊಂದಿಗೆ ಯುಎಇ ಬಂದಿಳಿದೆ. ಪಾಕಿಸ್ತಾನ ಎದುರಿನ ಮೊದಲ ಪಂದ್ಯದಲ್ಲೇ ಕಿವೀಸ್‌ ಆಘಾತಕಾರಿ ಸೋಲು ಕಂಡಿದೆ.

ಪಾಕ್‌ ವಿರುದ್ದದ ಪಂದ್ಯಕ್ಕೂ ಮುನ್ನ ಅಭ್ಯಾಸ ನಡೆಸುವ ವೇಳೆ ಮೀನ ಖಂಡದ ಗಾಯಕ್ಕೆ ಒಳಗಾಗಿರುವ ನ್ಯೂಜಿಲೆಂಡ್ ವೇಗಿ ಲಾಕಿ ಫರ್ಗ್ಯೂಸನ್‌ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದಿದ್ದಾರೆ.

 

ಪಾಕಿಸ್ತಾನ ವಿರುದ್ದದ ಪಂದ್ಯಕ್ಕೂ ಮುನ್ನ ವೇಗಿ ಲಾಕಿ ಫರ್ಗ್ಯೂಸನ್‌ ಬೌಲಿಂಗ್‌ ಅಭ್ಯಾಸ ನಡೆಸುತ್ತಿದ್ದ ವೇಳೆ ಗಾಯಗೊಂಡರು. ತಕ್ಷಣ ಅವರನ್ನು ಎಂಆರ್‌ಐ ಸ್ಕ್ಯಾನಿಂಗ್‌ಗೆ ಒಳಪಡಿಸಲಾಗಿದ್ದು, 4 ವಾರಗಳ ಕಾಲ ವಿಶ್ರಾಂತಿಯ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ.

14ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಕೋಲ್ಕತ ನೈಟ್‌ ರೈಡರ್ಸ್ ತಂಡವು ಫೈನಲ್‌ಗೇರುವಲ್ಲಿ ಲಾಕಿ ಫರ್ಗ್ಯೂಸನ್‌ ಮಹತ್ವದ ಪಾತ್ರ ವಹಿಸಿದ್ದರು. ಕೆಕೆಆರ್ ಪರ ಫರ್ಗ್ಯೂಸನ್‌ 8 ಪಂದ್ಯಗಳನ್ನಾಡಿ 13 ವಿಕೆಟ್ ಕಬಳಿಸಿದ್ದರು. ಇದೀಗ ಟಿ20 ವಿಶ್ವಕಪ್ ಟೂರ್ನಿಗೆ ಮೀಸಲು ಆಟಗಾರನಾಗಿ ತಂಡದಲ್ಲಿ ಸ್ಥಾನ ಪಡೆದಿದ್ದ ಆಡಂ ಮಿಲ್ನೆ, ಲಾಕಿ ಫರ್ಗ್ಯೂಸನ್‌ ಅವರ ಬದಲಿಗೆ ನ್ಯೂಜಿಲೆಂಡ್ ತಂಡವನ್ನು ಕೂಡಿಕೊಂಡಿದ್ದಾರೆ

Share post:

Subscribe

spot_imgspot_img

Popular

More like this
Related

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ ಹೈದರಾಬಾದ್:...

ಮಹಿಳೆಯರಿಗೆ ಉಪಕಾರ ಸ್ಮರಣೆ ಇದೆ ಎಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ: ಡಿ.ಕೆ.ಶಿವಕುಮಾರ್

ಮಹಿಳೆಯರಿಗೆ ಉಪಕಾರ ಸ್ಮರಣೆ ಇದೆ ಎಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ:...