T20 World Cup: ಟಿ20 ವಿಶ್ವಕಪ್ʼಗೆ ಭಾರತ ತಂಡ ಪ್ರಕಟ: ಉಪನಾಯಕನ ಬದಲಾವಣೆ!
ಮುಂಬೈ: 2026ರ ಟಿ20 ವಿಶ್ವಕಪ್ ಕ್ರಿಕೆಟ್‌ಗಾಗಿ ಭಾರತ ತಂಡವನ್ನು ಆಯ್ಕೆ ಮಾಡಲಾಗಿದೆ. ಮುಖ್ಯ ಪಂದ್ಯಾವಳಿಗೆ ಶುಭ್ಮನ್ ಗಿಲ್ ಅವರನ್ನು ತಂಡದಿಂದ ಹೊರಹಾಕಲಾಗಿದೆ. ಆಲ್‌ರೌಂಡರ್ ಅಕ್ಷರ್ ಪಟೇಲ್ ಉಪನಾಯಕನಾಗಿ ಆಯ್ಕೆಯಾಗಿದ್ದು, ಸೂರ್ಯಕುಮಾರ್ ಯಾದವ್ ತಂಡವನ್ನು ಮುನ್ನಡೆಸಲಿದ್ದಾರೆ.
ಬಹುತೇಕ ಆಫ್ರಿಕಾ ವಿರುದ್ಧ ಆಡಿದ ಆಟಗಾರರಿಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ. ಶುಭ್ಮನ್ ಗಿಲ್ ಸ್ಥಾನಕ್ಕೆ ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ ಅಥವಾ ಇಶಾನ್ ಕಿಶನ್ ಆರಂಭಿಕ ಬ್ಯಾಟರ್‌ಗಳಾಗಿ ಅವಕಾಶ ಪಡೆಯುವ ಸಾಧ್ಯತೆ ಇದೆ.
ಟಿ20 ವಿಶ್ವಕಪ್ ಕ್ರಿಕೆಟ್ ಭಾರತ ಮತ್ತು ಶ್ರೀಲಂಕಾದ ಆತಿಥ್ಯದಲ್ಲಿ ನಡೆಯಲಿದೆ. ಪಂದ್ಯಾವಳಿ ಫೆಬ್ರವರಿ 7 ರಿಂದ ಆರಂಭವಾಗಿ ಮಾರ್ಚ್ 8ರವರೆಗೆ ನಡೆಯಲಿದೆ.
ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ಕೀಪರ್), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಸರ್ ಪಟೇಲ್ (ಉಪನಾಯಕ), ರಿಂಕು ಸಿಂಗ್, ಜಸ್ಪ್ರೀತ್ ಬುಮ್ರಾ, ಹರ್ಷಿತ್ ರಾಣಾ, ಅರ್ಷದೀಪ್ ಯಾದವರ್ ಸಿಂಗ್, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ, ವಾಷಿಂಗ್ಟನ್ ಸುಂದರ್, ಇಶಾನ್ ಕಿಶಾನ್






