ವೆಸ್ಟ್ ಇಂಡೀಸ್ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಟೀಂ ಇಂಡಿಯಾವನ್ನು ಆಯ್ಕೆ ಮಾಡಲಾಗಿದ್ದು , ಏಷ್ಯಾಕಪ್ ನಿಂದ ಹೊರಗುಳಿದಿದ್ದ ಕ್ಯಾಪ್ಟನ್ ವಿರಾಟ್ ಕೊಹ್ಲಿ ಮರಳಿ ತಂಡ ಸೇರಿಕೊಂಡಿದ್ದಾರೆ.
ಶಿಖರ್ ಧವನ್, ಮುರುಳಿ ವಿಜಯ್, ರೋಹಿತ್ ಶರ್ಮಾ, ಜಸ್ ಪ್ರೀತ್ ಬೂಮ್ರಾ, ಇಶಾಂತ್ ಶರ್ಮಾ , ಹಾರ್ದಿಕ್ ಪಾಂಡ್ಯ, ಕರುಣ್ ನಾಯರ್ ಅವರನ್ನು ಆಯ್ಕೆಗೆ ಪರಿಗಣಿಸಿಲ್ಲ.
ವಿಶ್ವಕಪ್ ವಿಜೇತ ಅಂಡರ್ 19 ಟೀಂ ನ ಕ್ಯಾಪ್ಟನ್ ಪೃಥ್ವಿ ಶಾ, ಮಯಾಂಕ್ ಅಗರವಾಲ್ ಅವರಿಗೆ ಅವಕಾಶ ಕಲ್ಪಿಸಲಾಗಿದೆ.
ಉಳಿದಂತೆ ಕೆ.ಎಲ್ ರಾಹುಲ್, ಚೇತೇಶ್ವರ ಪೂಜಾರ, ಅಜಿಂಕ್ಯಾ ರಹಾನೆ, ಹನುಮ ವಿಹಾರಿ, ರಿಷಬ್ ಪಂತ್, ಆರ್. ಅಶ್ವಿನ್, ರವೀಂದ್ರ ಜಡೇಜ, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್ , ಶಾರ್ದೂಲ್ ಠಾಕೂರ್ ತಂಡದಲ್ಲಿದ್ದಾರೆ.