‘ದಿ ವಿಲನ್’ ಕ್ಲೈಮ್ಯಾಕ್ಸ್ ಹೀಗಿದೆ…!

Date:

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ‘ದಿ ವಿಲನ್’ ಸಿನಿಮಾ ದಿನದಿಂದ ದಿನಕ್ಕೆ ಕುತೂಹಲವನ್ನು ಹೆಚ್ಚಿಸುತ್ತಿದೆ.


ಕರಿಯ, ಎಕ್ಸ್ ಕ್ಯೂಸ್ ಮಿ, ಜೋಗಿ ಖ್ಯಾತಿಯ ನಿರ್ದೇಶಕ ಪ್ರೇಮ್ ಶಿವಣ್ಣ ಮತ್ತು ಸುದೀಪ್ ಅವರನ್ನು ಹಾಕಿಕೊಂಡು ದಿ ವಿಲನ್ ನಿರ್ದೇಶಿಸುತ್ತಿರೋದು ನಿರೀಕ್ಷೆಯನ್ನು ಹೆಚ್ಚಿಸಿದೆ.


ಬೆಂಗಳೂರು, ಚಿಕ್ಕಮಗಳೂರು, ಉತ್ತರ ಕರ್ನಾಟಕ, ಲಂಡನ್ ನಲ್ಲಿ ಚಿತ್ರೀಕರಣ ಮುಗಿಸಿರೋ ಪ್ರೇಮ್ ಈಗ ಕೊನೆಯ ಹಂತದ ಚಿತ್ರೀಕರಣದಲ್ಲಿ ಬ್ಯುಸಿ ಇದ್ದಾರೆ.


ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಸೆಟ್ ಹಾಕಲಾಗಿದ್ದು, ಇಲ್ಲಿ ಕ್ಲೈಮ್ಯಾಕ್ಸ್ ಫೈಟ್ ನಡೆಯಲಿದೆ. ಶಿವಣ್ಣ ಮತ್ತು ಸುದೀಪ್ ನಡುವೆ ಇಲ್ಲಿ ಫೈಟ್ ಸೀನ್ ಇದ್ದು, ವಿಲನ್ ಗಳ ಕಾಳಗ ಎಂದು ದೃಶ್ಯವನ್ನು ಬಣ್ಣಿಸಲಾಗುತ್ತಿದೆ.


ಸಾಹಸ ನಿರ್ದೇಶಕ ರವಿವರ್ಮ ಅವರ ಮುಂದಾಳತ್ವದಲ್ಲಿ ಈ ಕ್ಲೈಮ್ಯಾಕ್ಸ್ ಫೈಟಿಂಗ್ ದೃಶ್ಯದ ಚಿತ್ರೀಕರಣ ನಡೀತಿದೆ. ಈ ದೃಶ್ಯದಲ್ಲಿ ದಿ ವಿಲನ್ ಸಿನಿಮಾದ ಅಸಲಿ ವಿಲನ್ ಯಾರೆಂದು ಗೊತ್ತಾಗಲಿದೆ ಎಂದು ಹೇಳಲಾಗುತ್ತಿದೆ.
ದಿ ವಿಲನ್ ಹೈ ವೋಲ್ಟೇಜ್ ಫೈಟ್ ಸೀನ್ ಶೂಟಿಂಗ್ ನಡೆಯುತ್ತಿರೋ ಬಗ್ಗೆ ಪ್ರೇಮ್ ಸೋಶಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ.

Share post:

Subscribe

spot_imgspot_img

Popular

More like this
Related

ಡಿ ಕೆ ಶಿವಕುಮಾರ್ ಬೆಂಗಳೂರು ಅಭಿವೃದ್ಧಿಯ ಹೊಣೆ ಹೊತ್ತಿರುವುದು ನಮ್ಮ ಪುಣ್ಯ: ನಾಗರಿಕರ ಪ್ರಶಂಸೆ

ಡಿ ಕೆ ಶಿವಕುಮಾರ್ ಬೆಂಗಳೂರು ಅಭಿವೃದ್ಧಿಯ ಹೊಣೆ ಹೊತ್ತಿರುವುದು ನಮ್ಮ ಪುಣ್ಯ:...

ಜಾರ್ಖಂಡ್‌ನಲ್ಲಿ ವೈದ್ಯಕೀಯ ನಿರ್ಲಕ್ಷ್ಯ — ರಕ್ತ ಪಡೆದ ಐದು ಮಕ್ಕಳಿಗೆ ಎಚ್‌ಐವಿ ಸೋಂಕು

ಜಾರ್ಖಂಡ್‌ನಲ್ಲಿ ವೈದ್ಯಕೀಯ ನಿರ್ಲಕ್ಷ್ಯ — ರಕ್ತ ಪಡೆದ ಐದು ಮಕ್ಕಳಿಗೆ ಎಚ್‌ಐವಿ...

ಬೆಳಿಗ್ಗೆ ಎದ್ದಾಕ್ಷಣ ಇವುಗಳನ್ನು ನೋಡಿದರೆ ಅದೃಷ್ಟ – ಆದರೆ ಈ ಕೆಲಸ ತಪ್ಪದೇ ಬಿಡಿ!

ಬೆಳಿಗ್ಗೆ ಎದ್ದಾಕ್ಷಣ ಇವುಗಳನ್ನು ನೋಡಿದರೆ ಅದೃಷ್ಟ – ಆದರೆ ಈ ಕೆಲಸ...

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ: HDK

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ:...