ತಿರುಪತಿ ಲಾಡು ವಿವಾದ: ತನಿಖೆಗೆ ವಿಶೇಷ ತಂಡ ರಚಿಸಿ ಸುಪ್ರೀಂ ಕೋರ್ಟ್‌ ಆದೇಶ

Date:

ತಿರುಪತಿ ಲಾಡು ವಿವಾದ: ತನಿಖೆಗೆ ವಿಶೇಷ ತಂಡ ರಚಿಸಿ ಸುಪ್ರೀಂ ಕೋರ್ಟ್‌ ಆದೇಶ

ನವದೆಹಲಿ: ಆಂಧ್ರದಲ್ಲಿ ಹಿಂದಿನ ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಮುಖ್ಯಮಂತ್ರಿ ಈ ತಿಂಗಳ ಆರಂಭದಲ್ಲಿ ಹೇಳಿಕೊಂಡಿದ್ದರು. ಇದು ಭಾರಿ ರಾಜಕೀಯ ಗದ್ದಲಕ್ಕೆ ಕಾರಣವಾಗಿತ್ತು. ಈ ಆರೋಪದ ಬಗ್ಗೆ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿ ವಿಶೇಷ ತನಿಖಾ ತಂಡದಿಂದ ಸ್ವತಂತ್ರ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ.
ತಿರುಪತಿ ಲಡ್ಡು ವಿವಾದ ಕೋಟ್ಯಂತರ ಜನರ ನಂಬಿಕೆ ವಿಚಾರವಾಗಿದೆ. ಈ ಪ್ರಕರಣದ ತನಿಖೆಗೆ ಸ್ವತಂತ್ರ ತನಿಖಾ ತಂಡ ಅಗತ್ಯವಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಇದಕ್ಕಾಗಿ ಹೊಸದಾಗಿ ತನಿಖೆ ನಡೆಸುವಂತೆ ಕೋರ್ಟ್ ಆದೇಶಿಸಿದೆ. ಪ್ರಕರಣದ ತನಿಖೆಗೆ ಸಿಬಿಐ, ರಾಜ್ಯ ಪೊಲೀಸ್ ಮತ್ತು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‌ಎಸ್‌ಎಸ್‌ಎಐ) ಅಧಿಕಾರಿಗಳನ್ನು ಒಳಗೊಂಡಿರುವ ಐದು ಸದಸ್ಯರುಗಳ ಹೊಸ ತನಿಖಾ ತಂಡವನ್ನು ರಚಿಸಲಾಗುತ್ತದೆ ಎಂದು ಕೋರ್ಟ್‌ ಹೇಳಿದೆ.
ನ್ಯಾಯಮೂರ್ತಿಗಳಾದ ಬಿ.ಆರ್ ಗವಾಯಿ ಮತ್ತು ಕೆ.ವಿ ವಿಶ್ವನಾಥನ್ ಅವರಿದ್ದ ದ್ವಿಸದಸ್ಯ ಪೀಠವು ತಿರುಪತಿ ಲಡ್ಡು ತಯಾರಿಕೆಯಲ್ಲಿ ಕಲಬೆರಕೆಯಾಗಿದೆ ಎಂಬ ಆರೋಪದ ಬಗ್ಗೆ ವಿಶೇಷ ತನಿಖೆ ನಡೆಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿತು. ಈ ವೇಳೆ ತಿರುಪತಿ ವಿಚಾರದಲ್ಲಿ ರಾಜಕೀಯ ನಾಟಕವನ್ನು ನೋಡಲು ನಾವು ಬಯಸುವುದಿಲ್ಲ. ಏಕೆಂದರೆ ಇದು ಪ್ರಪಂಚದಾದ್ಯಂತದ ಕೋಟ್ಯಂತರ ಭಕ್ತರ ನಂಬಿಕೆಯ ವಿಷಯವಾಗಿದೆ ಎಂದು ಹೇಳಿದೆ.

Share post:

Subscribe

spot_imgspot_img

Popular

More like this
Related

Elephant Teeth: ಆನೆ ದಂತಕ್ಕೆ ಏಕೆ ಅಷ್ಟೊಂದು ಬೇಡಿಕೆ! ಇಲ್ಲಿ ತಿಳಿಯಿರಿ

Elephant Teeth: ಆನೆ ದಂತಕ್ಕೆ ಏಕೆ ಅಷ್ಟೊಂದು ಬೇಡಿಕೆ! ಇಲ್ಲಿ ತಿಳಿಯಿರಿ ಇತಿಹಾಸದುದ್ದಕ್ಕೂ...

ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ

ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ಮಂಗಳೂರು: ಮಹೇಶ್...

ಕಲ್ಯಾಣ ಕರ್ನಾಟಕದ ಬಗ್ಗೆ ರಾಜ್ಯ ಸರ್ಕಾರ ನಿರ್ಲಕ್ಷ್ಯ: ಸಿಸಿ ಪಾಟೀಲ್ ಬೇಸರ

ಕಲ್ಯಾಣ ಕರ್ನಾಟಕದ ಬಗ್ಗೆ ರಾಜ್ಯ ಸರ್ಕಾರ ನಿರ್ಲಕ್ಷ್ಯ: ಸಿಸಿ ಪಾಟೀಲ್ ಬೇಸರ ಬೆಂಗಳೂರು:-ಕಲ್ಯಾಣ...

ಅಕ್ರಮ ಆಸ್ತಿ ಕೇಸ್: ಶೃಂಗೇರಿ ಶಾಸಕ ರಾಜೇಗೌಡ್ರಿಗೆ ಲೋಕಾಯುಕ್ತ ಶಾಕ್

ಅಕ್ರಮ ಆಸ್ತಿ ಕೇಸ್: ಶೃಂಗೇರಿ ಶಾಸಕ ರಾಜೇಗೌಡ್ರಿಗೆ ಲೋಕಾಯುಕ್ತ ಶಾಕ್ ಚಿಕ್ಕಮಗಳೂರು: ಶೃಂಗೇರಿ...