No menu items!
18.8 C
Munich
Wednesday, July 29, 2026

ಒಂದೇ ಮರಕ್ಕೆ ನೇಣು ಬಿಗಿದುಕೊಂಡ ಓರ್ವ ಬಾಲಕ, ಇಬ್ಬರು ಬಾಲಕಿಯರು…!?

Must read

ಮೂವರು ಅಪ್ರಾಪ್ತರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆದಿದೆ.
ಓರ್ವ ಬಾಲಕ ಮತ್ತು ಇಬ್ಬರು ಬಾಲಕಿಯರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ರೀತಿಯಲ್ಲಿ ಶವ ಪತ್ತೆಯಾಗಿದೆ.‌ ಮೇಲ್ನೋಟಕ್ಕೆ ಆತ್ಮಹತ್ಯೆ ಎಂದೇ ಪರಿಗಣಿಸಲಾಗಿದೆ.


ದೇಶಾಲ್ ಖಾನ್ (17), ಶಾಂತಿ (13) ಮತ್ತು ಮಧು (12) ಆತ್ಮಹತ್ಯೆಗೆ ಶರಣಾದ ಅಪ್ರಾಪ್ತರು. ಭಾನುವಾರ ಮುಂಜಾನೆ ನೇಣು ಬಿಗಿದುಕೊಂಡ‌ ಸ್ಥಿತಿಯಲ್ಲಿ ಇವರ ಶವ ಸಿಕ್ಕಿದೆ. ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ಶಾಂತಿ ತಂದೆ ಭೈರು ಮೆಗ್ವಾಲ್ ಆರೋಪಿಸಿದ್ದಾರೆ. ಮೃತ ಬಾಲಕ ಕೆಟ್ಟವನಿದ್ದ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಈ ಮೂವರ ನಡುವೆ ಪ್ರೀತಿಯ ಸಂಬಂಧವಿತ್ತು ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article