ತೀವ್ರ ವಿರೋಧದ ನಡುವೆಯೂ ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಿಸಲಾಗುತ್ತಿದೆ.
ಬಿಜೆಪಿ, ಹಿಂದೂಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸುತ್ತಿವೆ. ಈ ನಡುವೆಯೂ ಸರ್ಕಾರ ಟಿಪ್ಪು ಜಯಂತಿ ಆಚರಿಸ್ತಿದೆ.
ಅಹಿತಕರ ಘಟನೆಗಳು ನಡೆಯಬಹುದೆಂದು ಮುಂಜಾಗೃತ ಕ್ರಮವಾಗಿ
ಕೊಡಗು, ಚಿಕ್ಕಮಗಳೂರು, ಚಿತ್ರದುರ್ಗ, ದಕ್ಷಿಣ ಕನ್ನಡ ಮತ್ತು ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಏರಲಾಗಿದೆ.
ಕೊಡಗಿನಲ್ಲಿ ಟಿಪ್ಪುಜಯಂತಿ ವಿರೋಧಿ ಸಮಿತಿ ಜಿಲ್ಲಾ ಬಂದ್ ಗೆ ಕರೆ ನೀಡಿರುವುದರಿಂದ ಖಾಸಗಿ ಬಸ್, ಆಟೋ ಸಂಚಾರ ಸ್ಥಗಿತಗೊಳಿಸಲಾಗಿದೆ.