ಟೆಲಿವಿಶನ್ ಪ್ರೀಮಿಯರ್ ಲೀಗ್ ಟೂರ್ನಮೆಂಟ್‌ ಟೀಸರ್ ಹೇಗಿದೆ ಗೊತ್ತಾ ?

Date:

ಇನ್ನೆರಡು ದಿನದಲ್ಲಿ ಟಿಪಿಎಲ್ ಫೀವರ್ ಶುರುವಾಗಲಿದೆ. ಕಲಾವಿದರು ಹಾಗು ತಂತ್ರಜ್ಞರ ಬದುಕಿಗೆ ಆಸರೆಯಾಗುವ ಉದ್ದೇಶದಿಂದ N1 ಕ್ರಿಕೆಟ್ ಅಕಾಡೆಮಿ ಟೆಲಿವಿಶನ್ ಪ್ರೀಮಿಯರ್ ಲೀಗ್ ನಡೆಯಲಿದೆ. ಇದೀಗ ಟೂರ್ನಮೆಂಟ್‌ನ ಟೀಸರ್ ಬಿಡುಗಡೆ ಮಾಡಲಾಗಿದೆ.

ಎಸ್, ಕಲಾವಿದರು ಮತ್ತು ಟೆಕ್ನೀಶಿಯನ್ ಬದುಕಿನ ಆಸರೆಯಾಗಿ ಟಿಪಿಲ್ ಮೂರನೇ ಆವೃತ್ತಿ ಈ ಬಾರಿ ಹುಬ್ಬಳ್ಳಿಯಲ್ಲಿ ನಡೆಯಲಿದೆ. ಇದೇ ಫೆಬ್ರವರಿ 28 ರಿಂದ ಮಾರ್ಚ್ 3 ರವರೆಗೆ ಕೆಎಸ್‌ಸಿಎ ಮೈದಾನದಲ್ಲಿ ನಡೆಯಲಿದ್ದು, ಕಿರುತರೆ ಕಲಾವಿದರನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ರಾಜನಗರದ ಕೆಎಸ್ಸಿಎ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿವೆ. 12 ಓವರ್‌ಗಳ ಪಂದ್ಯದಲ್ಲಿ 10 ತಂಡಗಳು ಭಾಗವಹಿಸಲಿವೆ. ಐಪಿಎಲ್ ರೀತಿಯಲ್ಲೇ ಇಲ್ಲಿ ಆಟಗಾರರ ಬಿಡ್ಡಿಂಗ್ ನಡೆಯಲಿದೆ. ಈ ಬಾರಿಯ‌ ಕ್ರಿಕೆಟ್‌ನಲ್ಲಿ ಸ್ಯಾಂಡಲ್‌ವುಡ್ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ, ಲೂಸ್ ಮಾದ ಯೋಗಿ ರವಿಶಂಕರ್‌ ಗೌಡ ಭಾಗಿಯಾಗುತ್ತಿರುವುದು ವಿಶೇಷ

ಟಿಪಿಎಲ್‌ನಲ್ಲಿ ಅಶ್ವಸೂರ್ಯ ರೈಡರ್ಸ್, ಗೋಲ್ಡನ್ ಈಗಲ್, ಕೆಕೆಆರ್ ಮೀಡಿಯಾ ಹೌಸ್, ಬಯೋಟಾಪ್‌,ಲೈಫ್ ಸೆವಿಯರ್, AVR ಟಸ್ಕರ್ಸ್, ರಾಸು, ವಾರಿಯ‌ರ್, ಭಜರಂಗಿ ಬಾಯ್ಸ್, ದಿ ಬುಲ್‌ ಸ್ಕ್ಯಾಡ್, ಇನ್ನೇನ್‌ ಕ್ರಿಕೆಟ್ ಟೀಂ, ಜಿಎಲ್‌ಆ‌ರ್
ವಾರಿಯರ್ಸ್‌ ಸೇರಿದಂತೆ ಒಟ್ಟು 10 ಟೀಂ ಭಾಗಿಯಾಗಲಿದೆ.

ಈ 10 ತಂಡಗಳಿಗೂ ಅಂಬಾಸಿಡರ್ ಹಾಗೂ ಓನರ್ಗಳಿರಲಿದ್ದಾರೆ. ಎವಿಆರ್ ಗ್ರೂಪ್ಸ್ ಹೆಚ್ ವೆಂಕಟೇಶ್ ರೆಡ್ಡಿ ಹಾಗೂ ಅರವಿಂದ್ ವೆಂಕಟೇಶ್ ರೆಡ್ಡಿ ಟೈಟಲ್ ಸ್ಪಾನ್ಸರ್ ಮಾಡಿದ್ದಾರೆ. ಇನ್ನೂ ಟಿಪಿಎಲ್ ಆವೃತ್ತಿಯ ಟೀಸರ್ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರಿಲೀಸ್ ಮಾಡಿದ್ದು, ಅಭಿಮಾನಿಳಲ್ಲಿ ಸಖತ್ ಕ್ರೇಜ್ ಹುಟ್ಟಿಸಿದೆ.

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌ ಸೇರಿ 70 ಮಂದಿಗೆ ಗೌರವ

ಕರ್ನಾಟಕ ರಾಜ್ಯೋತ್ಸವ 2025 ನೇ ಸಾಲಿನ ಪ್ರಶಸ್ತಿ ಪ್ರಕಟ; ಪ್ರಕಾಶ್‌ ರಾಜ್‌...

ಚಿತ್ತಾಪುರದಲ್ಲಿ RSS ಪಥಸಂಚಲನ: ಕಲಬುರಗಿ ಹೈಕೋರ್ಟ್ ಮಹತ್ವದ ಸೂಚನೆ

ಚಿತ್ತಾಪುರದಲ್ಲಿ RSS ಪಥಸಂಚಲನ: ಕಲಬುರಗಿ ಹೈಕೋರ್ಟ್ ಮಹತ್ವದ ಸೂಚನೆ ಕಲಬುರಗಿ: ಚಿತ್ತಾಪುರದಲ್ಲಿ ನವೆಂಬರ್...

ಟನಲ್ ರಸ್ತೆ ಬೇಡ ಹೇಳುವುದಕ್ಕೆ ಈ ತೇಜಸ್ವಿ ಸೂರ್ಯ ಯಾರು?: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ

ಟನಲ್ ರಸ್ತೆ ಬೇಡ ಹೇಳುವುದಕ್ಕೆ ಈ ತೇಜಸ್ವಿ ಸೂರ್ಯ ಯಾರು?: ಡಿಸಿಎಂ...

ಮತ್ತೆ ಇಳಿಕೆಯ ಹಾದಿಗೆ ಬಂದ ಚಿನ್ನ, ಬೆಳ್ಳಿ ಬೆಲೆ! ಹೀಗಿದೆ ದರ

ಮತ್ತೆ ಇಳಿಕೆಯ ಹಾದಿಗೆ ಬಂದ ಚಿನ್ನ, ಬೆಳ್ಳಿ ಬೆಲೆ! ಹೀಗಿದೆ ದರ ಬೆಂಗಳೂರು:...