No menu items!
13.6 C
Munich
Saturday, August 22, 2026

ಜಿಮ್ ಟ್ರೈನರ್ ಮೇಲೆ ಹಲ್ಲೆ ಪ್ರಕರಣ; ನಟ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್ ಅರೆಸ್ಟ್

Must read

ಜಿಮ್ ಟ್ರೈನರ್ ಮೇಲೆ ಹಲ್ಲೆ ಪ್ರಕರಣ; ನಟ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್ ಅರೆಸ್ಟ್

ಬೆಂಗಳೂರು: ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್ ಬಂಧನ ಆಗಿದೆ. ಹೌದು ಮೇ.26 ರಂದು ರಾತ್ರಿ ಪ್ರಾಶಾಂತ್ ಪೂಜಾರಿ ಮೇಲೆ ಹಲ್ಲೆ ನಡೆದಿತ್ತು. ಹರ್ಷ ಮತ್ತು ಸುಭಾಷ್ ಎಂಬುವವರು ಪ್ರಶಾಂತ್ ಮೇಲೆ ಹಲ್ಲೆ ಮಾಡಿದ್ದರು.
ಹಲ್ಲೆ ಮಾಡಿಸಿದ್ದು ಧ್ರುವ ಸರ್ಜಾ ಬಳಿ ಕೆಲಸ ಮಾಡಿಕೊಂಡಿದ್ದ ನಾಗೇಂದ್ರ. ಧ್ರುವ ಸರ್ಜಾಗೆ ನಾಗೇಂದ್ರ ಚಾಲಕನಾಗಿಯೂ ಕೆಲಸ ಮಾಡಿದ್ದ. ನಾಗೇಂದ್ರಗೆ ಸಾಥ್ ಕೊಟ್ಟಿದ್ದೆ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್ ಅನ್ನೋದು ಗೊತ್ತಾಗಿದೆ.
ಪ್ರಶಾಂತ್ ಪೂಜಾರಿ ಅವರು ಧ್ರುವ ಸರ್ಜಾಗೆ ಆಪ್ತರಾಗಿದ್ದರು. ಧ್ರುವಗೆ ಜಿಮ್ನಲ್ಲಿ ಟ್ರೇನ್ ಮಾಡುತ್ತಿದ್ದುದು ಇದೇ ಪ್ರಶಾಂತ್. ಇಬ್ಬರ ನಡುವಿನ ಆಪ್ತತೆಯನ್ನು ನಾಗೇಂದ್ರ ಹಾಗೂ ಅಶ್ವಿನ್ಗೆ ಸಹಿಸಿಕೊಳ್ಳಲು ಆಗುತ್ತಿರಲಿಲ್ಲ ಎನ್ನಲಾಗಿದೆ. ಹೀಗಾಗಿ ಹಲ್ಲೆಗೆ ಪ್ಲ್ಯಾನ್ ರೂಪಿಸಿದರು. ತಾವೇ ಹಲ್ಲೆ ಮಾಡಿದರೆ ಗೊತ್ತಾಗುತ್ತದೆ ಎಂದು ಸ್ನೇಹಿತರ ಕೈಯಲ್ಲಿ ಹಲ್ಲೆ ಮಾಡಿಸಿದ್ದರಂತೆ.
ಕನಕಪುರ ಮೂಲದ ಹರ್ಷ ಮತ್ತು ಸುಭಾಷ್ ಅವರನ್ನು ಮುಂದಕ್ಕೆ ಬಿಟ್ಟು ಅಶ್ವಿನ್ ಹಲ್ಲೆ ಮಾಡಿಸಿದ್ದರು. ತನಿಖೆ ವೇಳೆ ಅಶ್ವಿನ್ ಪಾತ್ರ ಇರೋದು ಬೆಳಕಿಗೆ ಬಂದಿದೆ. ಈ ಹಿನ್ನೆಲೆ ಅರೆಸ್ಟ್ ಮಾಡಲಾಗಿದೆ.

- Advertisement -spot_img

More articles

- Advertisement -spot_img

Latest article