ಮುಂಬೈನ ಗಣೇಶ ವಿಗ್ರಹವನ್ನು ವಿಸರ್ಜನೆ ಮಾಡುವ ಸಂದಂರ್ಭದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬನನ್ನು ನೀರಿನಲ್ಲಿ ಮುಳುಗಿಸಿ ಕೊಲೆ ಮಾಡಲು ಯತ್ನಿಸುತ್ತಿದ್ದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ.
ಗಣೇಶ ವಿಗ್ರಹ ವಿಸರ್ಜನೆ ವೇಳೆ ಜನ ಸಮೂಹವನ್ನು ನಿಯಂತ್ರಸಲು ಲಘು ಲಾಠಿ ಪ್ರಹಾರ ನಡೆಸಿದ್ದ ಪೊಲೀಸ್ ಸಿಬ್ಬಂದಿ ನಿತೀನ್ ದಗೋಡೆ ಎಂಬಾತನನ್ನು ಕಾರ್ಯಕರ್ತರೊಬ್ಬರು ನೀರಿನಲ್ಲಿ ಮುಳುಗಿಸಿ ಒತ್ತಿ ಹಿಡಿದಾಗ ಜೀವ ಉಳಿಸಿಕೊಳ್ಳಲು ಒದ್ದಾಡುತ್ತಿದ್ದ ದೃಶ್ಯವು ವಿಡಿಯೋದಲ್ಲಿ ಸೆರೆಯಾಗಿದೆ. ಕೊಳದಿಂದ ತಪ್ಪಿಸಿಕೊಂಡು ಬಂದ ಬಳಿಕವೂ ದಗೋಡೆ ಅವರ ಮೇಲೆ ಇನ್ನೂ ಮೂವರು ಕಾರ್ಯ ಕರ್ತರು ದಾಳಿ ನಡೆಸಿರುವುದೂ ಕೂಡ ವಿಡಿಯೋದಲ್ಲಿ ಸೆರೆಯಾಗಿದೆ.
ಈ ಹಿಂದೆ ಮುಂಬೈನ ಕಲ್ಯಾಣದಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂಧಿಯೋರ್ವನನ್ನು ಒಡೆದು ಕೊಲ್ಲಲಾದ ಘಟನೆ ಮಾಸುವ ಮುನ್ನ ಮತ್ತೊಂದು ದುರಂತ ಸಂಭವಿಸಿದೆ. ಇದರೊಂದಿಗೆ ಕಳೆದ ಹದಿನೈದು ದಿನಗಳಲ್ಲಿ ಮುಂಬೈಯಲ್ಲಿ ಪೊಲೀಸರ ಮೇಲೆ ನಡೆಸಿದ 7ನೇ ಪ್ರಕರಣ ಎಂದು ಹೇಳಲಾಗಿದೆ. ಈ ಸಂಬಂಧ ಶಿವ ಸೇನಾ ಮುಖ್ಯಸ್ಥ ಉದ್ದವ್ ಠಾಕ್ರೆ ಅವರು ಮುಖ್ಯಮಂತ್ರಿ ದೇವೇಂದ್ರ ಫಡ್ನಾವಿಸ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಲಿರುವುದಾಗಿ ತಿಳಿಸಿದ್ದಾರೆ. ಈ ಸಂಬಂಧ ಪೊಲೀಸರು ಕೊಲೆ ಯತ್ನ ಕೇಸನ್ನು ದಾಖಲಿಸಿಕೊಂಡಿದ್ದರೂ ಆರೋಪಿಗಳನ್ನು ಬಂಧಿಸಿಲ್ಲ.
POPULAR STORIES :
ಶುಕ್ರವಾರ ತಮಿಳು ಚಾನೆಲ್ಸ್ ಬಂದ್…!
ಇನ್ಮುಂದೆ ಡ್ರೈವ್ ಮಾಡಲು ಡಿಎಲ್,ಆರ್‍ಸಿ, ಡಿಜಿಲಾಕರ್‍ನಲ್ಲಿದ್ದರೆ ಸಾಕು..!
ಸೆಪ್ಟೆಂಬರ್ 9ಕ್ಕೆ ಕರ್ನಾಟಕ ಬಂದ್‍ಗೆ ಕರೆ
ಮುಸ್ಲೀಂ ಮಕ್ಕಳಿಗೆ ಕುರಾನ್ ಹೇಳಿ ಕೊಡ್ತಾಳೆ ಈ ಹಿಂದು ಯುವತಿ..!
ತಮಿಳುನಾಡಿಗೆ ಕಾವೇರಿ ನೀರು: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ.
ದೇಹದಲ್ಲಿರೋ ವಿಟಮಿನ್ ಕೊರತೆಯನ್ನು ಪತ್ತೆ ಹಚ್ಚುವುದು ಹೇಗೆ..??
ಬಂಪರ್ ಆಫರ್…! 500ರೂ. ಕೊಟ್ಟು ಒಂದು ದಿನ ಜೈಲುವಾಸ ಅನುಭವಿಸಿ..!
ಒಲಿಂಪಿಕ್ಸ್ ನಲ್ಲಿ ಚಿನ್ನ ಗೆದ್ದ ಆಕೆಗೆ ಅಲ್ಲಿನ ಸರ್ಕಾರ ಕೊಟ್ಟ ಉಡುಗೊರೆ ಏನು ಗೊತ್ತಾ…?