ಬೆಂಗಳೂರು : ಕನ್ನಡ ಚಿತ್ರರಂಗದ ನಟ ಉಪೇಂದ್ರ ನಿರ್ದೇಶನದ “UI” ಸಿನಿಮಾಗೆ ಇಂದು ಮುಹೂರ್ತ ನೆರವೇರಿದೆ. ಕಿಚ್ಚ ಸುದೀಪ್ ಕ್ಲಾಪ್ ಮಾಡಿ ಮುಹೂರ್ತ ನೆರವೇರಿಸಿದ್ದಾರೆ. ರಿಯಲ್ ಸ್ಟಾರ್ ಉಪೇಂದ್ರ ಹೊಸ ಗೆಟಪ್ನಲ್ಲಿ ಎಂಟ್ರಿ ಕೊಟ್ಟಿದ್ದು, ಬೆಂಗಳೂರಿನ ಗವಿಪುರಂ ಗುಟ್ಟಹಳ್ಳಿಯ ಬಂಡಿ ಮಹಾಕಾಳಿ ದೇವಸ್ಥಾನದಲ್ಲಿ ಪೂಜೆ ಮಾಡಿ ಕ್ಲಾಪ್ ಮಾಡಲಾಗಿದೆ. ನಟ ಶಿವರಾಜ್ಕುಮಾರ್, ಗೀತಾ ಶಿವರಾಜ್ಕುಮಾರ್, ಡಾಲಿ ಧನಂಜಯ್, ನಟ ವಸಿಷ್ಟ ಸೇರಿ ಹಲವರು ಸಾಥ್ ನೀಡಿದ್ದಾರೆ. ಉಪೇಂದ್ರ ಬಿಳಿ ಪಂಚೆಯುಟ್ಟು, ಗೋವಿಂದನ ತಿಲಕವಿಟ್ಟು ಡಿಫರೆಂಟ್ ಆಗಿ ಕಾಣಿಸಿಕೊಂಡರು..