ಜಾತಿ ಜನಗಣತಿ ವರದಿ ಸರಿಯಿಲ್ಲ ಅಂತ ಕಾಂಗ್ರೆಸ್‌ನ 50%-60% ನಾಯಕರು ಹೇಳ್ತಿದ್ದಾರೆ: ಸಚಿವ ವಿ.ಸೋಮಣ್ಣ
ಬೆಂಗಳೂರು: ಜಾತಿ ಜನಗಣತಿ ವರದಿ ಸರಿಯಿಲ್ಲ ಅಂತ ಕಾಂಗ್ರೆಸ್‌ನ 50%-60% ನಾಯಕರು ಹೇಳ್ತಿದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಜನಗಣತಿ ವರದಿ ಸರಿಯಿಲ್ಲ ಅಂತ ಕಾಂಗ್ರೆಸ್‌ನ 50%-60% ನಾಯಕರು ಹೇಳ್ತಿದ್ದಾರೆ.
ಹಲವು ಕಡೆ ಸಮೀಕ್ಷೆ ಮಾಡಿಲ್ಲ, ವರದಿಯಲ್ಲಿ ಮಕ್ಕಿ ಕಾ ಮಕ್ಕಿ ಆಗಿದೆ. ಹೊರೆಯಾದರೂ ಪರವಾಗಿಲ್ಲ ಮತ್ತೊಂದು ಸಮಿತಿ ಮಾಡಿ, ಒಂದು ವರ್ಷದಲ್ಲಿ ಹೊಸ ಸಮೀಕ್ಷೆ ಮಾಡಿಸಿ. ಈಗಿನ ವರದಿ ಜಾರಿಯಾದರೆ ರಾಜ್ಯದಲ್ಲಿ ಕೋಮುದಳ್ಳುರಿ ಆಗುತ್ತೆ, ಅದಕ್ಕೆ ಸಿದ್ದರಾಮಯ್ಯ ಅವರೇ ಕಾರಣ ಆಗ್ತಾರೆ ಎಂದರು.
ಸಿದ್ದರಾಮಯ್ಯ ಅವರಿಗೆ ಪೂರ್ಣ ಸತ್ಯ ಗೊತ್ತಿದೆ. ಆದ್ರೆ ಅವರು ಅವರ ಕುರ್ಚಿ ಉಳಿಸಿಕೊಳ್ಳಲು ವರದಿ ಜಾರಿಗೆ ಮುಂದಾಗಿದ್ದಾರೆ. ಮೊನ್ನೆ ಮೊನ್ನೆ ಅವರ ಹೈಕಮಾಂಡ್ ನಾಯಕರು ಅವರನ್ನು ಕರೆದು ಹೇಳಿದ್ದಾರೆ, ಸಿದ್ದರಾಮಯ್ಯ ಅವರ ಇವತ್ತಿನ ಪರಿಸ್ಥಿತಿ ನೋಡಿದ್ರೆ, ಈ ಮಟ್ಟಕ್ಕೂ ಅವರು ಬಂದಿದ್ದಾರಾ ಅನ್ನೋ ನೋವು ಕಾಡುತ್ತೆ ನನಗೆ ಎಂದು ಹೇಳಿದ್ದಾರೆ.