ವಾಲ್ಮೀಕಿ ಹಗರಣದ ಹಣ ಬಳಕೆ ಆರೋಪ: ಸಂಸದ ಇ.ತುಕಾರಾಂ ಸೇರಿ ಹಲವರ ನಿವಾಸದ ಮೇಲೆ ದಾಳಿ
ಬೆಂಗಳೂರು: ವಾಲ್ಮೀಕಿ ನಿಗಮದ ಭ್ರಷ್ಟಾಚಾರ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದ್ದು, ಸಂಸದ ಇ.ತುಕಾರಾಮ್, ಶಾಸಕ ಭರತ್ ರೆಡ್ಡಿ ಸೇರಿದಂತೆ ಹಲವರ ಮನೆಗಳ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಳ್ಳಾರಿ ಲೋಕಸಭಾ ಚುನಾವಣೆಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಬಳಕೆ ಮಾಡಿರುವ ಆರೋಪದ ಮೇಲೆ ಇ.ಡಿ ಅಧಿಕಾರಿಗಳು ಬಳ್ಳಾರಿ ಜಿಲ್ಲೆಯ ಶಾಸಕರು ಮತ್ತು ಸಂಸದರ ಮನೆ ಮೇಲೆ ದಾಳಿ ನಡೆಸಿದ್ದಾರೆ. ಈ ಹಿನ್ನಲೆಯಲ್ಲಿ ಏಕಕಾಲಕ್ಕೆ ಮೂವರ ಮನೆ ಮೇಲೂ ಇ.ಡಿ ದಾಳಿ ಮಾಡಲಾಗಿದೆ. ದಾಖಲೆಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ.
ಇತ್ತ ವಿಜಯನಗರದಲ್ಲೂ ಇ.ಡಿ ದಾಳಿ ನಡೆಸಲಾಗಿದೆ. ವಾಲ್ಮೀಕಿ ನಿಗಮದ ಹಗರಣ ಪ್ರಕರಣ ಸಂಬಂಧ ಕೂಡ್ಲಿಗಿ ಶಾಸಕ ಡಾ. NT ಶ್ರೀನಿವಾಸ್ ಮನೆಯಲ್ಲೂ ED ಸರ್ಚ್ ಮಾಡುತ್ತಿದೆ. ಕೂಡ್ಲಿಗಿ ತಾಲೂಕಿನ ನರಸಿಂಹಗಿರಿಯಲ್ಲಿರೋ ಕೂಡ್ಲಿಗಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ. NT ಶ್ರೀನಿವಾಸ್ ಮನೆ ಮೇಲೂ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರಿನಲ್ಲೂ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಶಾಸಕರಿಗೆ ಸೇರಿದ ರೂಂ ಮೇಲೆ ದಾಳಿ ನಡೆಸಲಾಗಿದೆ. ಎಲ್ ಹೆಚ್ ನ 360 ರೂಂ ನಂಬರ್ ಮೇಲೆ ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಶಾಸಕರಿಗೆ ಸೇರಿದ ರೂಂ ಮೇಲೆ ದಾಳಿ ನಡೆಸಿ ಬೆಳಗ್ಗೆಯೇ ಪರಿಶೀಲನೆಗೆ ಇಳಿದಿದ್ದಾರೆ.