ವರಮಹಾಲಕ್ಷ್ಮಿ ಹಬ್ಬಕ್ಕೆ ಮುಜರಾಯಿ ಇಲಾಖೆಯಿಂದ ಗುಡ್ ನ್ಯೂಸ್

0
42

ಈ ಬಾರಿಯ ಶ್ರೀ ವರಮಹಾಲಕ್ಷ್ಮಿ ವ್ರತವನ್ನು ಮುಜರಾಯಿ ಇಲಾಖೆಯ ವತಿಯಿಂದ ವಿಶೇಷವಾಗಿ ಆಚರಿಸಲು ನಿರ್ಧರಿಸಲಾಗಿದೆ. ಹಬ್ಬದ ದಿನದಂದು ಮುಜರಾಯಿ ದೇವಸ್ಥಾನಗಳಲ್ಲಿ ಮಹಿಳೆಯರಿಗೆ ಅರಿಶಿಣ-ಕುಂಕುಮ ವಿತರಿಸಲಾಗುವುದು ಎಂದು ಸಚಿವೆ ಶಶಿಕಲಾ ಜೊಲ್ಲೆ ಸುತ್ತೋಲೆ ಹೊರಡಿಸಿದ್ದಾರೆ. ರಾಜ್ಯದ ಮುಜರಾಯಿ ದೇವಸ್ಥಾನಗಳ ವತಿಯಿಂದ ಮಹಿಳೆಯರಿಗೆ ವಿಶೇಷವಾಗಿ ಮಂಗಳದ್ರವ್ಯಗಳನ್ನು ಹಾಗೂ ಹಸಿರು ಬಳೆಗಳನ್ನು ನೀಡುವುದರ ಮೂಲಕ ಗೌರವಿಸಬೇಕು ಎನ್ನುವ ಉದ್ದೇಶದಿಂದ ಇತ್ತೀಚಿಗೆ ನಡೆದ ರಾಜ್ಯ ಧಾರ್ಮಿಕ ಪರಿಷತ್ತಿನ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಲಾಗಿತ್ತು. ಪ್ರತಿವರ್ಷ ದೀಪಾವಳಿಯ ಸಂಧರ್ಭದಲ್ಲಿ ದೇವಸ್ಥಾನಗಳಲ್ಲಿ ಗೋಪೂಜೆ, ಯುಗಾದಿ ದಿನವನ್ನು ಧಾರ್ಮಿಕ ದಿನ ವಾಗಿ ಆಚರಣೆ ಮಾಡುವ ಸಂಪ್ರದಾಯಕ್ಕೂ ನಾವು ಮುಂದಾಗಿದ್ದೇವೆ. ಈ ಬಾರಿ ಶ್ರೀ ವರಮಹಾಲಕ್ಷ್ಮಿ ವ್ರತದ ದಿನದಂದು ಮಹಿಳೆಯಿರಿಗೆ ವಿಶೇಷ ಗೌರವ ನೀಡುವುದು ನಮ್ಮ ಉದ್ದೇಶವಾಗಿದೆ. ಈ ಹಿನ್ನಲೆಯಲ್ಲಿ ಈಗಾಗಲೇ ಸುತ್ತೋಲೆಯನ್ನು ಹೊರಡಿಸಲಾಗಿದ್ದು, ಲಕೋಟೆಯಲ್ಲಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಲಾಗಿರುವ 6 ಹಸಿರು ಬಳೆಗಳು ಹಾಗೂ ಕಸ್ತೂರಿ ಅರಿಶಿಣ-ಕುಂಕುಮವನ್ನು ವಿತರಿಸಬೇಕು ಎಂದು ದೇವಾಲಯದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

LEAVE A REPLY

Please enter your comment!
Please enter your name here