No menu items!
8.4 C
Munich
Wednesday, September 30, 2026

ವಿಜಯಪುರದಲ್ಲಿ ತಡರಾತ್ರಿ ಭೂಮಿ ಕಂಪಿಸಿದ ಅನುಭವ; ಬಸವನ ಬಾಗೇವಾಡಿಯಲ್ಲಿ 3.5 ತೀವ್ರತೆಯ ಭೂಕಂಪ

Must read

ವಿಜಯಪುರದಲ್ಲಿ ತಡರಾತ್ರಿ ಭೂಮಿ ಕಂಪಿಸಿದ ಅನುಭವ; ಬಸವನ ಬಾಗೇವಾಡಿಯಲ್ಲಿ 3.5 ತೀವ್ರತೆಯ ಭೂಕಂಪ

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನಲ್ಲಿ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆ ದಾಖಲಾಗಿದೆ. ತಡರಾತ್ರಿ 2:04ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಸ್ಥಳೀಯರಲ್ಲಿ ಕೆಲಕಾಲ ಆತಂಕ ಮೂಡಿಸಿದೆ.
ರಾಷ್ಟ್ರೀಯ ಭೂಕಂಪನ ಕೇಂದ್ರ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರ (KSNDMC) ಭೂಕಂಪನದ ಕುರಿತು ಮಾಹಿತಿ ನೀಡಿವೆ.
ಬಸವನ ಬಾಗೇವಾಡಿ ತಾಲೂಕಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭೂಕಂಪನದ ಅನುಭವವಾಗಿದೆ. ತಡರಾತ್ರಿ ಏಕಾಏಕಿ ಭೂಮಿ ಕಂಪಿಸಿದ್ದರಿಂದ ಕೆಲ ನಿವಾಸಿಗಳು ಆತಂಕಗೊಂಡಿದ್ದಾರೆ.
ಸದ್ಯ ಲಭ್ಯವಾಗಿರುವ ಮಾಹಿತಿಯ ಪ್ರಕಾರ, ಭೂಕಂಪನದಿಂದ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿಗೆ ಹಾನಿ ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ.
ಮುನ್ನೆಚ್ಚರಿಕಾ ಕ್ರಮವಾಗಿ ಪರಿಸ್ಥಿತಿಯ ಮೇಲೆ ನಿಗಾ ಇಡುವಂತೆ ಜಿಲ್ಲಾಡಳಿತಕ್ಕೆ ರಾಜ್ಯ ವಿಪತ್ತು ನಿರ್ವಹಣಾ ಸಂಸ್ಥೆ ಸೂಚನೆ ನೀಡಿದೆ.

- Advertisement -spot_img

More articles

- Advertisement -spot_img

Latest article