ಜೀ5 ಒಟಿಟಿಗೆ ಲಗ್ಗೆ ಇಡ್ತಿದ್ದಾನೆ ವಿಕ್ರಾಂತ್ ರೋಣ

Date:

ವಿಕ್ರಾಂತ್ ರೋಣ ಸುದೀಪ್ ಅಭಿನಯದ ಸೂಪರ್ ಹಿಟ್ ಸಿನಿಮಾ. ಪ್ಯಾನ್ ಇಂಡಿಯಾ ಸೆನ್ಸೇಷನ್ ಕ್ರೀಯೆಟ್ ಮಾಡಿದ್ದ ಸಿನಿಮಾ . ಇಷ್ಟು ದಿನ ಚಿತ್ರಮಂದಿರದಲ್ಲಿ ರಂಜಿಸಿದ್ದ ವಿಕ್ರಾಂತ್ ಈಗ ಓಟಿಟಿಗೆ ಲಗ್ಗೆ ಇಡ್ತಿದ್ದಾನೆ . ಕಿಚ್ಚ ಸುದೀಪ್ ಹಾಗೂ ಅನೂಪ್ ಭಂಡಾರಿ ಕಾಂಬಿನೇಷನ್ ವಿಕ್ರಾಂತ್ ರೋಣ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಸೇರಿದೆ. ಕಿಚ್ಚನ ಸಿನಿಕರಿಯರ್ ನ ವಿಭಿನ್ನ ಸಿನಿಮಾ ಎನಿಸಿಕೊಂಡ ಈ ಚಿತ್ರ , ಜುಲೈ 28 ರಂದು ವಿಶ್ವಾದ್ಯಂತ ತೆರೆ ಕಂಡಿತ್ತು. ಬಾಕ್ಸಾಫೀಸ್‌ನಲ್ಲಿಯೂ ಭರ್ಜರಿ ಕಮಾಯಿ ಮಾಡಿದ್ದ ವಿಕ್ರಾಂತ್ ರೋಣ ಈಗ ಜೀ5 ಒಟಿಟಿಗೆ ಲಗ್ಗೆ ಇಡ್ತಿದೆ .

 

ಸೆಪ್ಟೆಂಬರ್ 2ರಂದು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಜನುಮದಿನ ಇರೋದ್ರಿಂದ , ಪ್ರತಿಷ್ಠಿತ ಒಟಿಟಿ ಜೀ5ಕ್ಕೆ ಗುಮ್ಮ ಗ್ರ್ಯಾಂಡ್ ಎಂಟ್ರಿ ಕೊಡಲಿದ್ದಾನೆ. ಅದಕ್ಕೂ ಮುನ್ನ ಜೀ5 ಸ್ಪೆಷಲ್ ಟ್ರೇಲರ್ ವೊಂದನ್ನು ಅನಾವರಣ ಮಾಡಲಿದೆ‌. ಕನ್ನಡದಲ್ಲಿ ಮಾತ್ರ ವಿಕ್ರಾಂತ್ ರೋಣ ಜೀ5 ಒಟಿಟಿಯಲ್ಲಿ ಬಿಡುಗಡೆಯಾಗಲಿದ್ದು, ಶೀರ್ಘದಲ್ಲಿಯೂ ಬೇರೆ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ ಅನ್ನೋ ಮಾಹಿತಿ ಇದೆ .

ಜಾಕ್ ಮಂಜು ನಿರ್ಮಾಣದಲ್ಲಿ ಅದ್ಧೂರಿಯಾಗಿ ತಯಾರಾಗಿದ್ದ ವಿಕ್ರಾಂತ್ ರೋಣ ಸಿನಿಮಾದಲ್ಲಿ ಬಾಲಿವುಡ್ ಬ್ಯೂಟಿ ಜಾಕ್ವೆಲಿನ್ ಫರ್ನಾಂಡಿಸ್​ ಸುದೀಪ್ ಜೊತೆಗೆ ಹೆಜ್ಜೆ ಹಾಕಿದ್ದ ರಾ ರಾ ರಕ್ಕಮ್ಮ ಆಗಿ ಮಿಂಚಿದ್ರು .

ಇನ್ನೂ ನಿರೂಪ್​ ಭಂಡಾರಿ, ನೀತಾ ಅಶೋಕ್​, ಮಿಲನ ನಾಗರಾಜ್​, ​ ಮಧುಸೂದನ್​ ರಾವ್​, ರವಿಶಂಕರ್ ಗೌಡ ಮುಂತಾದವರು ನಟಿಸಿರುವ ಈ ಚಿತ್ರಕ್ಕೆ ಅಜನೀಶ್​ ಬಿ. ಲೋಕನಾಥ್​ ಸಂಗೀತ ನಿರ್ದೇಶನ ಮೋಡಿ ಮಾಡಿತ್ತು. ತ್ರಿಡಿ ಅವತರಣಿಕೆಯಲ್ಲಿ ಪಂಚ ಭಾಷೆಯಲ್ಲಿ ರಿಲೀಸ್ ಆದ ವಿಕ್ರಾಂತ್ ರೋಣ ಈಗ ಜೀ5 ಒಟಿಟಿಗೆ ಎಂಟ್ರಿ ಕೊಡ್ತಿದ್ದು, ಥಿಯೇಟರ್ ನಲ್ಲಿ ಮಿಸ್ ಮಾಡಿಕೊಂಡವರು ಮನೆಯಲ್ಲಿ ಇಡೀ ಮನೆ ಮಂದಿ ಜೊತೆ ಕುಳಿತು ಸಿನಿಮಾ ನೋಡಬಹುದು .

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...