ದಕ್ಷಿಣ ಆಫ್ರಿಕಾ ವಿರುದ್ಧ ಸೆಂಚೂರಿಯನ್ ನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಶತಕ ಬಾರಿಸಿದ್ದಾರೆ.
ನಿನ್ನೆ 85 ರನ್ ಬಾರಿಸಿ ಅಜೇಯರಾಗಿ ಉಳಿದ್ದ ಕೊಹ್ಲಿ ಇವತ್ತು ಸಹ ತಾಳ್ಮೆಯ ಆಟವನ್ನು ಮುಂದುವರೆಸಿದ್ದಾರೆ. ಭಾರತ 6 ವಿಕೆಟ್ ನಷ್ಟಕ್ಕೆ 273 ರನ್ ಗಳಿಸಿದೆ.
ಕೊಹ್ಲಿ 128 ರನ್ ಗಳಿಸಿ ಆಡುತ್ತಿದ್ದಾರೆ. 38 ರನ್ ಗಳಿಸಿರುವ ರವಿಚಂದ್ರನ್ ಅಶ್ವಿನ್ ನಾಯಕನಿಗೆ ಸಾಥ್ ನೀಡುತ್ತಿದ್ದಾರೆ.
ದ. ಆಫ್ರಿಕಾ ಪ್ರಥಮ ಇನ್ನಿಂಗ್ಸ್ ನಲ್ಲಿ 335ರನ್ ಗಳಿಗೆ ಆಲೌಟ್ ಆಗಿದೆ.