ಕೊಹ್ಲಿಯ ಚಾಲೆಂಜ್ ಸ್ವೀಕರಿಸಿದ ಪ್ರಧಾನಿ ಮೋದಿ…!

Date:

ಟೀಂ ಇಂಡಿಯಾದ ಕ್ಯಾಪ್ಟನ್ ವಿರಾಟ್ ಕೊಹ್ಲಿ ಅವರ ಚಾಲೆಂಜ್ ಅನ್ನು ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸ್ವೀಕರಿಸಿದ್ದಾರೆ.

ಕೊಹ್ಲಿ ಹಾಕಿರುವ ಫಿಟ್ ನೆಸ್ ಚಾಲೆಂಜಿಗೆ ಪ್ರತಿಕ್ರಿಯೆ ನೀಡಿರುವ ಮೋದಿ, ಚಾಲೆಂಜ್ ಸ್ವೀಕರಿಸಿರುವುದಾಗಿ ಟ್ವೀಟ್ ಮಾಡಿದ್ದಾರೆ.
ಹಮ್ ಫಿಟ್ ತೋ ಇಂಡಿಯಾ ಫಿಟ್ ಎಂಬ ಫಿಟ್ ನೆಸ್ ಚಾಲೆಂಜ್ ಗೆ ಕ್ರೀಡಾಪಟುಗಳು ಹಾಗೂ ಸಿನಿ ತಾರೆಯರಿಂದ ಉತ್ತಮ ಪ್ರತಿಕ್ರಿಯೆ ಬರುತ್ತಿದೆ. ಅಂತೆಯೇ ವಿರಾಟ್ ಕೊಹ್ಲಿ ತಾವು ಚಾಲೆಂಜ್ ಸ್ವೀಕರಿಸಿದ ಬಳಿಕ ಪತ್ನಿ ಅನುಷ್ಕಾ ಮತ್ತು ಪ್ರಧಾನಿ ಮೋದಿಗೆ ಚಾಲೆಂಜ್ ಫಾರ್ವಡ್ ಮಾಡಿದ್ದರು. ಇದಕ್ಕೆ ಉತ್ತರಿಸಿದ ಮೋದಿ, ಚಾಲೆಂಜ್ ಅಕ್ಸೆಪ್ಟೆಡ್ ವಿರಾಟ್, ಶೀಘ್ರದಲ್ಲೇ ನನ್ನ ಫಿಟ್ ನೆಸ್ ವೀಡಿಯೋವನ್ನು ಹಂಚಿಕೊಳ್ತೀನಿ ಎಂದು ಟ್ವೀಟ್ ಮಾಡಿದ್ದಾರೆ.


ಭಾರತಿಯರೆಲ್ಲಾ ಫಿಟ್ ನೆಸ್ ಜೀವನ ಶೈಲಿಯನ್ನು ಅಳವಡಿಸಿಕೊಳ್ಳೋಣ ಎಂದು ಕೇಂದ್ರ ಕ್ರೀಡಾ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ಟ್ಟಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದರು. ಬಳಿಕ ಕೊಹ್ಲಿ ಈ ಸವಾಲನ್ನು ಪೂರ್ಣಗೊಳಿಸಿದ್ದರು. ಕೊಹ್ಲಿ, ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಹಾಗೂ ಬಾಲಿವುಡ್ ನಟ ಹೃತಿಕ್ ರೋಷನ್ ಗೆ ಫಿಟ್ ನೆಸ್ ಅಭಿಯಾನದಲ್ಲಿ ಭಾಗಿಯಾಗಲು ನಿಮ್ಮ ವೀಡಿಯೋಗಳನ್ನು ಅಪ್‌ಲೋಡ್ ಮಾಡುವಂತೆ ರಾಥೋಡ್ ಚಾಲೆಂಜ್ ಹಾಕಿದ್ದರು.

Share post:

Subscribe

spot_imgspot_img

Popular

More like this
Related

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...