Virat Kohli: ಟೆಸ್ಟ್ ಕ್ರಿಕೆಟ್ಗೆ ವಿರಾಟ್ ಕೊಹ್ಲಿ ವಿದಾಯ ಘೋಷಣೆ
ರೋಹಿತ್ ಶರ್ಮಾ ನಂತರ, ಈಗ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿ ದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡುವ ಮೂಲಕ ಈ ಮಾಹಿತಿಯನ್ನು ನೀಡಿದರು. ಇದಕ್ಕೂ ಮುನ್ನ ಕೊಹ್ಲಿ ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು. ಹೀಗಾಗಿ ಬಿಸಿಸಿಐ ಅವರ ಮನವೊಲಿಸಲು ಮುಂದಾಗಿತ್ತು. ಆದರೆ ಈ ಮಾತುಕತೆ ಫಲಪ್ರದವಾಗಿಲ್ಲ. ಹೀಗಾಗಿಯೇ ಇದೀಗ ಕೊಹ್ಲಿ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿರುವುದನ್ನು ಅಧಿಕೃತಗೊಳಿಸಿದ್ದಾರೆ.
2011 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಟೆಸ್ಟ್ ಕೆರಿಯರ್ ಆರಂಭಿಸಿದ್ದ ವಿರಾಟ್ ಕೊಹ್ಲಿ, 2014 ರಲ್ಲಿ ಭಾರತ ಟೆಸ್ಟ್ ತಂಡದ ನಾಯಕರಾಗಿ ಆಯ್ಕೆಯಾಗಿದ್ದರು. ಇದಾದ ಬಳಿಕ ಅವರು ಹಿಂತಿರುಗಿ ನೋಡಿಲ್ಲ ಎನ್ನಬಹುದು.
ಅಲ್ಲದೆ ಟೀಮ್ ಇಂಡಿಯಾ ಪರ 123 ಟೆಸ್ಟ್ ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಅವರು 210 ಇನಿಂಗ್ಸ್ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ 16608 ಎಸೆತಗಳನ್ನು ಎದುರಿಸಿರುವ ಕೊಹ್ಲಿ ಒಟ್ಟು 9230 ರನ್ ಕಲೆಹಾಕಿದ್ದಾರೆ. ಇದರ ನಡುವೆ 30 ಶತಕ ಹಾಗೂ 31 ಅರ್ಧಶತಕಗಳನ್ನು ಬಾರಿಸಿದ್ದಾರೆ.