No menu items!
24.7 C
Munich
Saturday, May 2, 2026

ಜೀವಾವಧಿ ಶಿಕ್ಷೆ ಬೆನ್ನಲ್ಲೇ ಧಾರವಾಡ ಗ್ರಾಮೀಣ ಶಾಸಕ ಸ್ಥಾನ ಕಳೆದುಕೊಂಡ ವಿನಯ್ ಕುಲಕರ್ಣಿ!

Must read

ಜೀವಾವಧಿ ಶಿಕ್ಷೆ ಬೆನ್ನಲ್ಲೇ ಧಾರವಾಡ ಗ್ರಾಮೀಣ ಶಾಸಕ ಸ್ಥಾನ ಕಳೆದುಕೊಂಡ ವಿನಯ್ ಕುಲಕರ್ಣಿ!

ಬೆಂಗಳೂರು: ದೀರ್ಘಕಾಲದ ಕಾನೂನು ಹೋರಾಟ ಹಾಗೂ ರಾಜಕೀಯ ಬೆಳವಣಿಗೆಗಳ ನಡುವೆಯೇ ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ಅವರ ಶಾಸಕತ್ವವನ್ನು ಅನರ್ಹಗೊಳಿಸಿ ವಿಧಾನಸಭೆ ಕಾರ್ಯದರ್ಶಿ ಶನಿವಾರ ಮಹತ್ವದ ಆದೇಶ ಹೊರಡಿಸಿದ್ದಾರೆ.
ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ವಿನಯ್ ಕುಲಕರ್ಣಿ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೆಲವೇ ದಿನಗಳಲ್ಲಿ ಈ ಕ್ರಮ ಜಾರಿಗೊಂಡಿದೆ.
ಭಾರತೀಯ ಸಂವಿಧಾನದ ವಿಧಿ 191(1)(e) ಹಾಗೂ ಜನಪ್ರತಿನಿಧಿ ಕಾಯ್ದೆ-1951ರ ಸೆಕ್ಷನ್ 8ರ ಅನ್ವಯ ಅನರ್ಹತೆ ಆದೇಶ ಹೊರಡಿಸಲಾಗಿದೆ. ಈ ನಿಯಮದ ಪ್ರಕಾರ, ಯಾವುದೇ ಜನಪ್ರತಿನಿಧಿಗೆ ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚು ಅವಧಿಯ ಜೈಲು ಶಿಕ್ಷೆ ವಿಧಿಸಿದಲ್ಲಿ ಅವರು ತಕ್ಷಣದಿಂದಲೇ ಶಾಸಕರಾಗಿ ಮುಂದುವರಿಯಲು ಅರ್ಹರಾಗುವುದಿಲ್ಲ.
ನ್ಯಾಯಾಲಯ ಶಿಕ್ಷೆ ಪ್ರಕಟಿಸಿದ ಬಳಿಕವೂ ಅನರ್ಹತೆ ಆದೇಶ ಹೊರಡಿಸುವಲ್ಲಿ ವಿಧಾನಸಭೆ ಸಚಿವಾಲಯ ವಿಳಂಬ ಮಾಡುತ್ತಿದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿತ್ತು. ಮೇಲ್ಮನವಿ ಸಲ್ಲಿಸಿ ತಡೆಯಾಜ್ಞೆ ಪಡೆಯಲು ವಿನಯ್ ಕುಲಕರ್ಣಿಗೆ ಸರ್ಕಾರ ಸಮಯಾವಕಾಶ ಕಲ್ಪಿಸುತ್ತಿದೆ ಎಂದು ವಿರೋಧ ಪಕ್ಷದ ನಾಯಕರು ಟೀಕಿಸಿದ್ದರು.
ಆದರೆ ಇದೀಗ ಎಲ್ಲ ಊಹಾಪೋಹಗಳಿಗೆ ತೆರೆ ಬಿದ್ದಿದ್ದು, ವಿಧಾನಸಭೆ ಕಾರ್ಯದರ್ಶಿ ಹೊರಡಿಸಿರುವ ಅಧಿಕೃತ ಆದೇಶದೊಂದಿಗೆ ವಿನಯ್ ಕುಲಕರ್ಣಿ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ.

- Advertisement -spot_img

More articles

- Advertisement -spot_img

Latest article