ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಯೊಬ್ಬರಿಗೆ ಸಚಿವ ವಿ.ಸೋಮಣ್ಣ ಕಪಾಳಮೋಕ್ಷ ಮಾಡಿದ್ದಾರೆ.
ಶನಿವಾರ ಗ್ರಾಮದ ಗ್ರಾಮ ಪಂಚಾಯಿತಿಯಿಂದ 175 ಜನರಿಗೆ ನಿವೇಶನ ಹಕ್ಕುಪತ್ರ ವಿತರಣೆ ಕಾರ್ಯಕ್ರಮ ಮಧ್ಯಾಹ್ನ ನಿಗದಿಯಾಗಿತ್ತು. ಆದರೆ ಸಚಿವರು ಸಂಜೆ 6.50ಕ್ಕೆ ಆಗಮಿಸಿದರು. ತಮಗೆ ನಿವೇಶನ ನೀಡಿ ಎಂದು ಒಬ್ಬರ ಮೇಲೆ ಒಬ್ಬರು ಬಿದ್ದು ಗೊಂದಲದ ಗೂಡಾಯಿತು.
ನಿವೇಶನದ ಹಕ್ಕು ಪತ್ರ ದೊರಕದವರು ಬಾಯಿಗೆ ಬಂದಂತೆ ನಿಂದಿಸಲಾರಂಭಿಸಿದರು. ಈ ಸಂದರ್ಭದಲ್ಲಿ ಸಚಿವರ ಬಳಿ ಸಮಸ್ಯೆ ಹೇಳಿಕೊಳ್ಳಲು ಹೋಗಿದ್ದ ಮಹಿಳೆಯ ಕಪಾಳಕ್ಕೆ ಸೋಮಣ್ಣ ಹೊಡೆದರು. ಸ್ಥಳದಲ್ಲಿದ್ದ ಪೊಲೀಸರು ಮಹಿಳೆಯನ್ನು ಕರೆದೊಯ್ದು ಸಮಾಧಾನಪಡಿಸಿದರು.