ಜನರಿಂದಲೇ ಸಾಧಕರ ಆಯ್ಕೆ ಮಾಡಲಾಗುವುದು

Date:

ರಾಜ್ಯೋತ್ಸವ ಪ್ರಶಸ್ತಿಗೆ ಜನರಿಂದಲೇ ಸಾಧಕರ ಆಯ್ಕೆ ಮಾಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್‌ ಕುಮಾರ್‌ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಹಿತಿ ನೀಡಿರುವ ಅವರು, ಈ ವರ್ಷ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಿದ್ದು, ಇದಕ್ಕಾಗಿ ಈಗಿನಿಂದಲೇ ಸಿದ್ಧತೆಗಳು ಆರಂಭವಾಗಿವೆ. ಅಮೃತ ಭಾರತಿಗೆ ಕನ್ನಡದಾರತಿ ಅಭಿಯಾನದ ಅಂಗವಾಗಿ ನಡೆಯುತ್ತಿರುವ ನಾಟಕ ಪ್ರದರ್ಶನವನ್ನು ಡಿಸೆಂಬರ್‌ವರೆಗೂ ನಡೆಸುವ ಚಿಂತನೆ ಇದೆ ಎಂದರು. ಇನ್ನು ಮಳೆಗಾಲದ ಅಧಿವೇಶನ ಸಂದರ್ಭದಲ್ಲಿ ಶಾಸಕರಿಗೂ ನಾಟಕ ಪ್ರದರ್ಶನ ಏರ್ಪಡಿಸಲಾಗಿದ್ದು, ಸೆಪ್ಟಂಬರ್‌ನಲ್ಲಿ ಅಧಿವೇಶನ ನಡೆಯಲಿದ್ದು, ಬ್ಯಾಂಕ್ವೆಟ್‌ ಹಾಲ್‌ನಲ್ಲಿ ನಾಟಕ ಪ್ರದರ್ಶಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ರಾಜ್ಯದ ನಾಲ್ಕು ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಘೋಷಣೆ! ಗುಡುಗು ಸಹಿತ ಮಳೆ

ರಾಜ್ಯದ ನಾಲ್ಕು ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಘೋಷಣೆ! ಗುಡುಗು ಸಹಿತ...

ನಾವು ಬಿಸಾಡುವ ಈ ವಸ್ತುವಿಗಿದೆ ವಿಷ ಸರ್ಪ ಓಡಿಸುವ ಶಕ್ತಿ; ಯಾವುದು?

ನಾವು ಬಿಸಾಡುವ ಈ ವಸ್ತುವಿಗಿದೆ ವಿಷ ಸರ್ಪ ಓಡಿಸುವ ಶಕ್ತಿ; ಯಾವುದು? ನಮ್ಮ...

ಬಿಎಂಟಿಸಿ ಚಾಲಕನ ಯಡವಟ್ಟು: 9 ವಾಹನಗಳಿಗೆ ಡಿಕ್ಕಿ

ಬಿಎಂಟಿಸಿ ಚಾಲಕನ ಯಡವಟ್ಟು: 9 ವಾಹನಗಳಿಗೆ ಡಿಕ್ಕಿ ಬೆಂಗಳೂರು: ಬೆಂಗಳೂರಿನಲ್ಲಿ ಬಿಎಂಟಿಸಿ ಚಾಲಕನ...

9 ವರ್ಷದ ಬಾಲಕಿ ಮೇಲೆ ಹರಿದ ಬಸ್: ಬಿಎಂಟಿಸಿ ಬಸ್ಗೆ ಮತ್ತೊಂದು ಬಲಿ

9 ವರ್ಷದ ಬಾಲಕಿ ಮೇಲೆ ಹರಿದ ಬಸ್: ಬಿಎಂಟಿಸಿ ಬಸ್ಗೆ ಮತ್ತೊಂದು...