ಮುಂದಿನ ತಿಂಗಳಿಂದ ಡ್ಯಾಂ ನೀರು ಕೃಷಿಗಿಲ್ಲ, ಕುಡಿಯೋಕೆ ಮಾತ್ರ..!

Date:

ಪ್ರಸಕ್ತ ವರ್ಷದಲ್ಲಿ ಈ ಬಾರಿಯೂ ರಾಜ್ಯದಲ್ಲಿ ಮಳೆಯ ಪ್ರಮಾಣ ಗಣನೀಯವಾಗಿ ಕ್ಷೀಣಿಸಿದ್ದು 40ವರ್ಷಗಳ ನಂತರ ಇದೇ ಮೊದಲ ಬಾರಿಗೆ ರಾಜ್ಯದ ಹಲವಾರು ಅಣೆಕಟ್ಟಿನ ನೀರಿನ ಮಟ್ಟ ತೀರಾ ಕಡಿಮೆಯಾಗಿ ಬರದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನಲೆಯಲ್ಲಿ ಆಗಸ್ಟ್ 31ರಿಂದ ಕೃಷಿ ಕ್ಷೇತ್ರಗಳಿಗೆ ಪೂರೈಸುತ್ತಿದ್ದ ನೀರನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗುವುದು ಎಂದು ಸಚಿವ ಸಂಪುಟ ನಿರ್ಧರಿಸಿದೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದು, ಈ ಕುರಿತು ಮಾತನಾಡಿದ ಕಾನೂನು ಸಚಿವ ಟಿ.ಬಿ ಜಯಚಂದ್ರ ಈ ವರ್ಷವೂ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಜಲಾಶಯಗಳಲ್ಲಿರುವ ನೀರನ್ನು ಕುಡಿಯುವ ಉದ್ದೇಶಕ್ಕೆ ಮಾತ್ರ ಮೀಸಲಿಡಬೇಕು ಎಂದು ನಿರ್ಧರಿಸಿದ್ದೇವೆ ಎಂದರು. ನೀರಾವರಿ ಸಲಹಾ ಸಮಿತಿಗಳು ಈಗಿನ ಪರಿಸ್ಥಿಯ ಬಗ್ಗೆ ರೈತರಿಗೆ ಮನವರಿಕೆ ಮಾಡಿಕೊಟ್ಟು ಸರ್ಕಾರದ ಜೊತೆ ಸಹಕರಿಸುವಂತೆ ಮನವಿ ಮಾಡಬೇಕು ಎಂದು ಚರ್ಚೆ ನಡೆಸಿತ್ತು. ಈ ಬಾರಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿತ್ತು. ಆದರೆ ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳು ಹೊರತು ಪಡಿಸಿದರೆ ಉಳಿದೆಲ್ಲಾ ಜಲಾಶಯಗಳಲ್ಲೂ ನೀರಿನ ಅಭಾವವಿದೆ. ಮಹಾರಾಷ್ಟ್ರದಲ್ಲಿ ಉತ್ತಮ ಮಳೆ ಆಗಿರುವುದರಿಂದಲೇ ಇವೆರಡು ಜಲಾಶಯಗಳು ಭರ್ತಿಯಾಗಿವೆ ಎಂದು ಜಯಚಂದ್ರ ಹೇಳಿದರು.
ಬೆಂಗಳೂರು ನಗರಕ್ಕೆ 15 ಟಿಎಂಸಿ ಕುಡಿಯುವ ನೀರಿನ ಅವಶ್ಯಕತೆಯಿದೆ, ಡಿಸೆಂಬರ್ ಅಂತ್ಯಕ್ಕೆ 25 ಟಿಎಂಸಿ ನೀರನ್ನು ಶೇಖರಿಸಲಾಗುವುದು ಎಂದಿದ್ದಾರೆ. ಪ್ರಸ್ತುತದಲ್ಲಿ ಕೆಆರ್‍ಎಸ್‍ನಲ್ಲಿ 12.5 ಟಿಎಂಸಿ ನೀರಿದೆ. ಅದನ್ನು ರೈತರಿಗೆ 80 ದಿನಗಳ ಕಾಲ ಪೂರೈಸಿದ್ದೇ ಆದಲ್ಲಿ 40 ಟಿಎಂಸಿ ನೀರಿನ ಅಭಾವ ಬೀಳಲಿದೆ. ಇದು ಬೆಂಗಳೂರು ನಗರವಾಸಿಗಳಿಗೆ ಬಾರಿ ಹೊಡೆತ ಬೀಳಲಿದೆ.
ವಿದ್ಯತ್ ಕೊರತೆ ಇಲ್ಲ.
ನೀರಿನ ಕೊರತೆ ಉಂಟಾಗಿದ್ದರೂ ರಾಜ್ಯದಲ್ಲಿ ಈ ಬಾರಿ ವಿದ್ಯುತ್ ಕೊರತೆಯುಂಟಾಗುವುದಿಲ್ಲ. ಪ್ರಸ್ತುತದಲ್ಲಿ 9500 ಮಿಲಿಯನ್ ಯುನಿಟ್ ವಿದ್ಯುತ್ ಇದೆ. ಇದರಲ್ಲಿ ಕೇವಲ 8000 ಮಿಲಿಯನ್ ಯುನಿಟ್‍ಗಳಷ್ಟು ಮಾತ್ರ ಬಳಕೆ ಮಾಡಲಾಗುತ್ತಿದೆ. ಒಂದು ವೇಳೆ ಕೊರತೆಯುಂಟಾದರೆ ಖಾಸಗೀ ವಲಯದಲ್ಲಿ ಒಂದು ಯುನಿಟ್‍ಗೆ 4.36 ರಂತೆ ಖರೀದಿ ಮಾಡಲಾಗುತ್ತದೆ ಎಂದು ಇಂಧನ ಸಚಿವ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

POPULAR  STORIES :

ಸೆಕ್ಸ್ ಉದ್ಯಮದಲ್ಲಿ ಚೀನಾ ನಂ.1 ಭಾರತ ನಂ.7..!

ಮುಂದಿನ ದಿನಗಳಲ್ಲಿ ಮೂತ್ರಕ್ಕೂ ಬರ್ಬೋದು ಭಾರೀ ಬೇಡಿಕೆ..!

ಗಾಳಿಯಲ್ಲಿ ಕುಡಿಯುವ ನೀರು ಕಂಡು ಹಿಡಿದ ಮೊದಲ ಭಾರತೀಯ ಯುವಕ…!

ಪ್ರಾಣದ ಹಂಗು ತೊರೆದು ಪಾಕ್ ಧ್ವಜ ಕಿತ್ತೆಸೆದು ತ್ರಿವರ್ಣ ಧ್ವಜ ಹಾರಿಸಿದ ಧೀರ ಯೋಧ.

ಆಸ್ತಿಗಾಗಿ ಐಸಿಯುನಲ್ಲಿದ್ದ ತಂದೆಯ ಆಕ್ಸಿಜನ್ ಪೈಪ್ ಕಿತ್ತು ಹಾಕಿದ ಪುತ್ರಿ..!

ರೈಲು ನಿಲ್ದಾಣದಲ್ಲಿ ಸೆಲ್ಫಿ ತೆಗೆದರೆ ಐದು ವರ್ಷ ಜೈಲು..!

ಕಿಂಗ್ ಖಾನ್‍ಗೆ ಅಮೇರಿಕಾ ವಿಮಾನ ನಿಲ್ದಾಣದಲ್ಲಿ ಮತ್ತೊಮ್ಮೆ ಪಪ್ಪಿ ಶೇಮ್…!

ಸೈಕಲ್ ಕದಿಯಲು ಇಡೀ ಮರವನ್ನೇ ಕತ್ತರಿಸಿದ ಕತರ್ನಾಕ್ ಕಳ್ಳ…!

Share post:

Subscribe

spot_imgspot_img

Popular

More like this
Related

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ ಕೋಲಾರ:- ಜಿಲ್ಲೆ...

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ ಸಿದ್ದರಾ,ಯ್ಯ

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ...

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು?

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು? ಕೆಲವರಿಗೆ ಕೈ ಅಥವಾ...

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...