No menu items!
12.1 C
Munich
Thursday, May 7, 2026

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ಪಿಎ ಗುಂಡೇಟಿಗೆ ಬಲಿ

Must read

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ಪಿಎ ಗುಂಡೇಟಿಗೆ ಬಲಿ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ಬಳಿಕ ರಾಜ್ಯದಲ್ಲಿ ರಾಜಕೀಯ ಉದ್ವಿಗ್ನತೆ ಹೆಚ್ಚಾಗಿದ್ದು, ಹಿಂಸಾಚಾರವೂ ತೀವ್ರಗೊಂಡಿದೆ. ಈ ನಡುವೆ, ಬಿಜೆಪಿ ಹಿರಿಯ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಆತಂಕ ಮೂಡಿಸಿದೆ.
ಮೃತರನ್ನು ಚಂದ್ರನಾಥ್ ರಥ ಎಂದು ಗುರುತಿಸಲಾಗಿದೆ. ಮಧ್ಯಮಗ್ರಾಮ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ತೀವ್ರ ಕುತೂಹಲ ಕೆರಳಿಸಿದ್ದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ಕೇವಲ ಎರಡು ದಿನಗಳಲ್ಲೇ ಈ ಹತ್ಯೆ ನಡೆದಿರುವುದು ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದೆ. ಈ ಬಾರಿ ಬಿಜೆಪಿ ರಾಜ್ಯದಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ್ದು, 293 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 207 ಸ್ಥಾನಗಳಲ್ಲಿ ಜಯಗಳಿಸಿದೆ.
ಇನ್ನೊಂದೆಡೆ, ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಕೇವಲ 80 ಸ್ಥಾನಗಳಿಗೆ ಸೀಮಿತವಾಗಿದೆ. ಬಿಜೆಪಿ ಗೆಲುವಿನ ಹಿಂದೆ ಸುವೇಂದು ಅಧಿಕಾರಿ ಅವರ ಪಾತ್ರ ಪ್ರಮುಖವಾಗಿತ್ತು ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

- Advertisement -spot_img

More articles

- Advertisement -spot_img

Latest article