ಕರ್ನಾಟಕದ ಹವಾಮಾನದಲ್ಲಿ ಮತ್ತೆ ಬದಲಾವಣೆ: ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ!

Must read

ಕರ್ನಾಟಕದ ಹವಾಮಾನದಲ್ಲಿ ಮತ್ತೆ ಬದಲಾವಣೆ: ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ!

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಹವಾಮಾನ ಬದಲಾವಣೆಯಾಗುವ ಮುನ್ಸೂಚನೆ ದೊರೆತಿದೆ. ನವೆಂಬರ್ 8 ಮತ್ತು 9ರಂದು ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆದರೆ ರಾಜಧಾನಿ ಬೆಂಗಳೂರು ಸೇರಿದಂತೆ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.
ಹವಾಮಾನ ಇಲಾಖೆ ಮುನ್ಸೂಚನೆಯಂತೆ, ನವೆಂಬರ್ 8ರಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ನವೆಂಬರ್ 9ರಂದು ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಮಳೆಯಾಗಬಹುದು. ಉತ್ತರ ಕನ್ನಡ ಜಿಲ್ಲೆಯಲ್ಲಿ ಎರಡೂ ದಿನ ಒಣಹವೆ ಇರಲಿದೆ.
ಇನ್ನು ದಕ್ಷಿಣ ಒಳನಾಡಿನ ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ನವೆಂಬರ್ 8ರಂದು ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ನವೆಂಬರ್ 9ರಂದು ಕೊಡಗು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.
ಮತ್ತೊಂದೆಡೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಸೇರಿದಂತೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲೂ ಸದ್ಯಕ್ಕೆ ಮಳೆಯ ಮುನ್ಸೂಚನೆ ಇಲ್ಲ. ಹೀಗಾಗಿ ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಒಣಹವೆಯ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.

- Advertisement -spot_img

More articles

- Advertisement -spot_img

Latest article