ಬೆಂಗಳೂರು : ಬೆಂಗಳೂರಿನಲ್ಲಿ ವ್ಹೀಲಿಂಗ್ ವಿರುದ್ಧ ವಿಶೇಷ ಅಭಿಯಾನ ಮಾಡಲಾಗಿದೆ. ಈ ಸಂಬಂಧ ಸಂಚಾರ ವಿಭಾಗ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಹೇಳಿಕೆ ನೀಡಿದ್ದು, ಕಳೆದ ವಾರ 14 ವ್ಹೀಲಿಂಗ್ ಪ್ರಕರಣ ದಾಖಲಿಸಲಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಬಂದಿರುವ ದೂರು ಆಧರಿಸಿ 12 ಕೇಸ್ ದಾಖಲಿಸಲಾಗಿದೆ. ಈ ಪ್ರಕರಣಕ್ಕೆ 5-10 ಲಕ್ಷದವರೆಗೂ ಬಾಂಡ್ ಬರೆಸಿಕೊಳ್ಳುತ್ತೇವೆ. ವ್ಹೀಲಿಂಗ್ ಮಾಡುವವರ ಪೋಷಕರನ್ನು ಕೌನ್ಸೆಲಿಂಗ್ ಮಾಡುತ್ತಿದ್ದೇವೆ. ಬೆಂಗಳೂರಿನ ಎಲ್ಲ ಕಾಲೇಜು ಆಡಳಿತ ಮಂಡಳಿಗೆ ತಿಳಿ ಹೇಳಲಾಗಿದೆ. ಪಿಯು ವಿದ್ಯಾರ್ಥಿಗಳು ಕಾಲೇಜಿಗೆ ದ್ವಿಚಕ್ರ ವಾಹನ ತರುವಂತಿಲ್ಲ.
ಯಾಕೆಂದರೆ ಡಿಎಲ್ ಪಡೆಯಲು ಇನ್ನೂ ಅರ್ಹತೆ ಆಗಿರೋದಿಲ್ಲ. ನಕಲಿ ನಂಬರ್ ಪ್ಲೇಟ್ ಹೊಂದಿರುವ ವಾಹನ ಸಂಖ್ಯೆಗಳು ಸಿಗುತ್ತಿವೆ. ನಕಲಿ ವಾಹನಗಳ ಮಾಲೀಕರನ್ನ ಬಂಧಿಸಿ ಜೈಲಿಗೆ ಕಳುಹಿಸುತ್ತಿದ್ದೇವೆ. ಜೂನ್ನಲ್ಲಿ 22 ಸವಾರರು ಮದ್ಯಸೇವಿಸಿ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಯಾರೂ ಕೂಡ ಕುಡಿದು ವಾಹನ ಚಾಲನೆ ಮಾಡಬೇಡಿ ಎಂದು ಹೇಳಿದರು.