WTC ಫೈನಲ್‌ನಲ್ಲಿ ಕನ್ನಡಿಗರಿಗಿಲ್ಲ ಸ್ಥಾನ!

Date:

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದಲ್ಲಿ ಭಾಗವಹಿಸುವ ಅಂತಿಮ 15 ಆಟಗಾರರನ್ನು ಘೋಷಿಸಲಾಗಿದೆ. ಈ ಅಂತಿಮ 15ರ ತಂಡದಲ್ಲಿ ಕನ್ನಡಿಗರಾದ ಮಯಾಂಕ್ ಅಗರ್ವಾಲ್ ಹಾಗೂ ಕೆಎಲ್ ರಾಹುಲ್ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಹಾಗೂ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಗಾಗಿ 20 ಸದಸ್ಯರ ಭಾರತ ತಂಡವನ್ನು ಆಯ್ಕೆ ಮಾಡಿ ಇಂಗ್ಲೆಂಡ್‌ಗೆ ಕಳುಹಿಸಲಾಗಿತ್ತು. ಈ ಮೂಲಕ ಆರಂಭಿಕರಾಗಿ ಯಾರಿಗೆ ಅವಕಾಶ ಸಿಗಲಿದೆ ಎಂಬುದಕ್ಕೆ ಈಗಲೇ ಸ್ಪಷ್ಟ ಉತ್ತರ ಸಿಕ್ಕಿದ್ದು ರೋಹಿತ್ ಶರ್ಮಾ ಜೊತೆಗೆ ಶುಬ್ಮನ್ ಗಿಲ್ ಆರಂಭಿಕನಾಗಿ ಕಣಕ್ಕಿಳಿಯಲಿದ್ದಾರೆ.

ಇನ್ನು ಆಸ್ಟ್ರೇಲಿಯಾ ಪ್ರವಾಸದಲ್ಲಿ ಆಲ್‌ರೌಂಡರ್ ಪ್ರದರ್ಶನ ನೀಡಿ ಗೆಲುವಿನ ಹೀರೋಗಳೆನಿಸಿದ್ದ ವಾಶಿಂಗ್ಟನ್ ಸುಂದರ್ ಹಾಗೂ ಶಾರ್ದೂಲ್ ಠಾಕೂರ್‌ ಕೂಡ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವ ಅವಕಾಶ ಪಡೆದುಕೊಂಡಿಲ್ಲ. ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಮಿಂಚಿದ್ದ ಅಕ್ಷರ್ ಪಟೇಲ್ ಕೂಡ ಇಂಗ್ಲೆಂಡ್ ಪ್ರವಾಸದ ಭಾಗವಾಗಿದ್ದರೂ WTC ಫೈನಲ್ ಪಂದ್ಯದಲ್ಲಿ ಅಂತಿಮ 15 ಬಳಗದಿಂದ ಹೊರಬಿದ್ದಿದ್ದಾರೆ.

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯಕ್ಕೆ ಆಯ್ಕೆಯಾಗಿರುವ ಆ 15 ಆಟಗಾರರ ಪಟ್ಟಿ ಈ ಕೆಳಕಂಡಂತಿದೆ..

ರೋಹಿತ್ ಶರ್ಮಾ, ಶುಬ್ಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಹನುಮ ವಿಹಾರಿ, ರಿಷಭ್ ಪಂತ್, ವೃದ್ಧಿಮಾನ್ ಸಾಹಾ, ಆರ್ ಅಶ್ವಿನ್, ರವೀಂದ್ರ ಜಡೇಜಾ, ಜಸ್ಪ್ರೀತ್ ಬೂಮ್ರಾ, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್

 

 

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...