ಯಾದಗಿರಿಯಲ್ಲಿ ಸಿಡಿಲಿನ ಆರ್ಭಟ: ಒಂದೇ ಹೊಡೆತಕ್ಕೆ 60 ಕುರಿಗಳು ಸಾವು
ಯಾದಗಿರಿ: ಜಿಲ್ಲೆಯ ಗುರುಮಠಕಲ್ ತಾಲೂಕಿನ ಬುದುರು ಗ್ರಾಮದಲ್ಲಿ ಸಿಡಿಲು ಬಡಿದ ಪರಿಣಾಮ 60 ಕುರಿಗಳು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.ಕುರಿಗಾಹಿಗಳಾದ ಮಲ್ಲಪ್ಪ ಮತ್ತು ಜಲ್ಲಪ್ಪ ಅವರಿಗೆ ಸೇರಿದ ಕುರಿಗಳನ್ನು ಮೇಯಿಸಿಕೊಂಡು ಬರುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಜಿಲ್ಲೆಯಾದ್ಯಂತ ಬಿರುಗಾಳಿ ಸಹಿತ ಭಾರೀ ಮಳೆಯಾಗುತ್ತಿದ್ದ ವೇಳೆ ಏಕಾಏಕಿ ಸಿಡಿಲು ಬಡಿದು ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿವೆ.ಘಟನೆ ಗುರುಮಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಕುರಿಗಾಹಿಗಳಿಗೆ ಭಾರೀ ಆರ್ಥಿಕ ನಷ್ಟ ಉಂಟುಮಾಡಿದೆ.



