ಮತ್ತೆ ಒಂದಾದ ಸ್ಯಾಂಡಲ್ ವುಡ್ ಕ್ಯೂಟ್ ಜೋಡಿ

Date:

ಸ್ಯಾಂಡಲ್ ವುಡ್ ನ ಕ್ಯೂಟ್ ಜೋಡಿ ಯಶ್ ಮತ್ತು ರಾಧಿಕಾ ಪಂಡಿತ್ ಮತ್ತೆ ಜೊತೆಯಾಗ್ತಿದ್ದಾರೆ. ಈ ಮೂಲಕ ಇವರಿಬ್ಬರ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ಹೌದು ಮೊಗ್ಗಿನ ಮನಸ್ಸಿನಂತ ಈ ಜೋಡಿ ಒಟ್ಟಿಗೆ ಡ್ರಾಮಾ ಮಾಡಿ ಯಶಸ್ವಿಯಾಗಿ ನಂತ್ರ ಮಿಸ್ಟರ್ ಅಂಡ್ ಮಿಸಸ್ ರಾಮಾಚಾರಿ ಯಾಗಿ ಸಕ್ಸಸ್ ಪೇರ್ ಅನ್ನೋ ಬಿರುದು ತಂಗೊಡಿದ್ದು ಹಳೆ ಸುದ್ದಿ.

ಈಗ ಹೊಸ ಸುದ್ದಿ ಏನಪ್ಪಾ ಅಂದ್ರೆ ‘ಸಂತು Straight Forward’ ನಲ್ಲಿ ಅನ್ನೋ ಚಿತ್ರಕ್ಕಾಗಿ ಈ ಜೋಡಿ ಮತ್ತೆ ತೆರೆಮೇಲೆ ಒಂದಾಗುತ್ತಿದ್ದಾರೆ ಅನ್ನೋದು. ಇದು ಸೂಪರ್ ಹಿಟ್ ಜೋಡಿ ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್ ಜೊತೆಯಾಗಿ ಅಭಿನಯಿಸುತ್ತಿರುವ ನಾಲ್ಕನೇ ಸಿನಿಮಾ. ಅದ್ರಲ್ಲೂ, ಯಶ್ ವೃತ್ತಿಬದುಕಿಗೆ ದೊಡ್ಡ ತಿರುವು ಕೊಟ್ಟ ನಿರ್ಮಾಪಕ ಕೆ.ಮಂಜು ಪ್ರೊಡ್ಯೂಸ್ ಮಾಡ್ತಿರೋ ಚಿತ್ರ.

ಈ ಚಿತ್ರ ಅನೌನ್ಸ್ ಆದಾಗಿನಿಂದಲೂ ಒಂದಲ್ಲಾ ಒಂದು ಕಾರಣಕ್ಕೆ ಸುದ್ದಿ ಮಾಡುತ್ತಲೇ ಇದೆ. ಅದ್ರಲ್ಲೂ…ಟೈಟಲ್ ವಿಚಾರಕ್ಕೆ ಸಾಕಷ್ಟು ಅಂತೆ-ಕಂತೆಗಳು ಕೇಳಿ ಬಂದಿತ್ತು. ಈ ಎಲ್ಲಾ ಅಂತೆ ಕಂತೆಗಳಿಗೂ ಬ್ರೇಕ್ ಹಾಕಿರುವ ನಟಿ ರಾಧಿಕಾ ಪಂಡಿತ್, ತಮ್ಮ ಹೊಸ ಚಿತ್ರದ ಟೈಟಲ್ ಅನ್ನು ಅಧಿಕೃತವಾಗಿ ಅನೌನ್ಸ್ ಮಾಡಿದ್ದಾರೆ.

ಯೆಸ್, ಯಶ್ ಹಾಗೂ ರಾಧಿಕಾ ಪಂಡಿತ್ ಸ್ಕ್ರೀನ್ ಶೇರ್ ಮಾಡ್ತಿರೋ ಹೊಸ ಚಿತ್ರದ ಹೆಸರು ‘ಸಂತು Straight Forward’. ಹೊಸದಾಗಿ ಟ್ವಿಟ್ಟರ್ ಲೋಕಕ್ಕೆ ಕಾಲಿಟ್ಟಿರೋ ರಾಧಿಕಾ ತಮ್ಮ ಮುಂದಿನ ಚಿತ್ರದ ಶೀರ್ಷಿಕೆಯನ್ನು ಟ್ವೀಟ್ ಮಾಡೋ ಮೂಲಕ ಅನೌನ್ಸ್ ಮಾಡಿದ್ದಾರೆ.”ಕಡೆಗೂ ನಾನು ಟ್ವಿಟ್ಟರ್ ಜಗತ್ತಿಗೆ ಕಾಲಿಟ್ಟಿದ್ದೇನೆ. ಅದು ‘ಸಂತು Straight Forward’ ಮೂಲಕ. ನಿಮ್ಮ ಸ್ವಾಗತಕ್ಕೆ ನಾನು ಆಭಾರಿ” ಅಂತ ನಟಿ ರಾಧಿಕಾ ಪಂಡಿತ್ ಟ್ವೀಟ್ ಮಾಡಿ ಅಭಿಮಾನಿಗಳ ದಿಲ್ ಖುಷ್ ಮಾಡಿದ್ದಾರೆ.

ಇನ್ನು ಈ ಚಿತ್ರ ಹಲವು ಕಾರಣಗಳಿಗೆ ಕುತೂಹಲವನ್ನು ಕೆರಳಿಸಿದೆ ಜೊತೆ ಜೊತೆಗೆ ನಿರೀಕ್ಷೆಯನ್ನು ಉಂಟುಮಾಡಿದೆ. ಈ ಚಿತ್ರದಲ್ಲಿ ಯಶ್ ಮತ್ತು ರಾಧಿಕಾ ತುಂಬಾ ಸ್ಟೈಲಿಶ್ ಆಗಿ ಹೊಸ ಲುಕ್ ನಲ್ಲಿ ಕಾಣಿಸಿಕೊಳ್ಳುತ್ತಿದ್ರೆ, ವಿಲನ್ ಆಗಿ ಕಾಲಿವುಡ್ ನ ಖ್ಯಾತ ನಟ ಶ್ಯಾಮ್ ಕಾಣಿಸಿಕೊಳ್ಳುತ್ತಿದ್ದಾರೆ.

ಮುರಳಿ ಮೀಟ್ಸ್ ಮೀರಾ’, ‘ಕೇಸ್ ನಂ 18/9’ ಚಿತ್ರಗಳನ್ನ ನಿರ್ದೇಶಸಿರುವ ಮಹೇಶ್ ರಾವ್, ‘ಸಂತು Straight Forward’ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದು ಪ್ರೀ-ಪ್ರೊಡಕ್ಷನ್ ಹಂತದಲ್ಲಿರುವ ‘ಸಂತು Straight Forward’ ಚಿತ್ರದ ಶೂಟಿಂಗ್ ಇನ್ನು ಕೆಲವೇ ದಿನಗಳಲ್ಲಿ ಆರಂಭವಾಗಲಿದೆ. ಸೋ ಚಿತ್ರತಂಡಕ್ಕೆ ನಾವೂ ಆಲ್ ದಿ ಬೆಸ್ಟ್ ಹೇಳೋಣಾ…..

  •  “ ಶ್ರೀ “

POPULAR  STORIES :

9,50,00,000 ಬೆಲೆಯ ಆ್ಯಪ್ ನ 4 ನಿಮಿಷದಲ್ಲಿ ಅಭಿವೃದ್ಧಿ ಪಡಿಸಿದ ಭಾರತೀಯ..!

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ಎಸ್.ಯಡಿಯೂರಪ್ಪ.! ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿಕೆ..!

ಸ್ಯಾಂಡಲ್ ವುಡ್ ನಲ್ಲಿ ಅಪ್ಪ ಮಗನ ನಡುವೆ ಪೈಪೋಟಿ ಶುರುವಾಗಲಿದೆ..!

ಐಪಿಎಲ್ ಸೀಸನ್ 9ರಲ್ಲಿ ಪ್ರೇಕ್ಷಕನೇ 3ನೇ ಅಂಪೈರ್ ಅಂತೆ..!

ಮಿಸ್ಡ್ ಕಾಲ್ ಗೆಳೆಯ..! ಅವನ ಸಾವಿನ ಜೊತೆ ಇವಳು ಒಂದಾದಳು..!?

ಮೋದಿ ದೇಹದಲ್ಲಿ ಅಹ್ಮದ್ ಖಾನ್ `ಆತ್ಮ..!!’ ಮೋದಿಯಲ್ಲ, ಇಂದಿರಾ ಗಾಂಧಿಯಿದ್ದಿದ್ದರೂ ಆಗುತ್ತಿತ್ತು ಮಾರಣಹೋಮ..!!

`ಸೆಕ್ಸ್’ ಸೈಟುಗಳ ಹಾಟ್ ವಿಚಾರ..!? ಅಶ್ಲೀಲ ಎಂಎಂಎಸ್ ಹೇಗೆಲ್ಲಾ ಸೃಷ್ಟಿಯಾಗುತ್ತೆ ಗೊತ್ತಾ..!?

 

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...