ಪೋಕ್ಸೊ ಪ್ರಕರಣ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಮತ್ತೊಂದು ಸಂಕಷ್ಟ
ಬೆಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಇದೀಗ ಅವರ ವಿರುದ್ಧದ ವಿಚಾರಣೆಗೆ ಬೆಂಗಳೂರಿನ 1 ನೇ ತ್ವರಿತಗತಿ ನ್ಯಾಯಾಲಯ ಮಾರ್ಚ್ 15 ರಂದು ದಿನಾಂಕ ನಿಗದಿಪಡಿಸಿದ್ದು, ಖುದ್ದು ಹಾಜರಾಗುವಂತೆ ಸಮನ್ಸ್ ನೀಡಿದೆ.
ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪಗೆ ಕೆಲವೇ ದಿನಗಳ ಹಿಂದಷ್ಟೇ ಕರ್ನಾಟಕ ಹೈಕೋರ್ಟ್ನಲ್ಲಿ ರಿಲೀಫ್ ದೊರೆತಿತ್ತು. ಪ್ರಕರಣ ರದ್ದತಿ ಕೋರಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ಧಾರವಾಡ ಪೀಠ, ನಿರೀಕ್ಷಣಾ ಜಾಮೀನು ನೀಡಿತ್ತು.
ಆದರೆ, ಪ್ರಕರಣ ರದ್ದು ಮಾಡಲು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ನಿರಾಕರಿಸಿತ್ತು. ಹೀಗಾಗಿ ಯಡಿಯೂರಪ್ಪ ಬಂಧನದಿಂದ ಪಾರಾದರೂ ವಿಚಾರಣೆ ಎದುರಿಸಲೇಬೇಕಾಗಿದೆ. ಆದ್ದರಿಂದ ಇದೀಗ ಬೆಂಗಳೂರಿನ ನ್ಯಾಯಾಲಯ ವಿಚಾರಣೆಗೆ ದಿನ ನಿಗದಿಪಡಿಸಿದೆ. ಖುದ್ದು ಹಾಜರಾಗುವಂತೆ ಸಮನ್ಸ್ ನೀಡಿದೆ.