ವಿವಾಧಿತ ಧರ್ಮ ಪ್ರಚಾರಕ ಝಾಕಿರ್ ನಾಯ್ಕ್ ಸಂಸ್ಥೆಗೆ ಐದು ವರ್ಷ ನಿಷೇಧ..!

Date:

ದೇಶದಲ್ಲಿ ಸಾಮಾಜಿಕ ಮತ್ತು ಧಾರ್ಮಿಕ ಸಾಮರಸ್ಯತೆಯನ್ನು ಕದಡುತ್ತಿರುವ ಆರೋಪದ ಮೇಲೆ ವಿವಾದಿತ ಇಸ್ಲಾಂ ಧರ್ಮ ಪ್ರಚಾರಕ ಝಾಕೀರ್ ನಾಯಕ್ ಅವರ ಎನ್‍ಜಿಓ ಸಂಸ್ಥೆಯ ಮೇಲೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಐದು ವರ್ಷಗಳ ಕಾಲ ನಿಷೇಧ ಹೇರಿ ಆದೇಶ ಹೊರಡಿಸಿದೆ.
ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯನ್ವಯ ಇಸ್ಲಾಮಿಕ್ ರಿಸರ್ಚ್ ಫೌಂಡೇಷನ್ ಮೇಲೆ ನಾಲ್ಕು ಪ್ರಮುಖ ಅಂಶಗಳನ್ನಿಟ್ಟು ಅವರ ಎನ್‍ಜಿಓ ಸಂಸ್ಥೆಯನ್ನು ಬ್ಯಾನ್ ಮಾಡಲು ನಿರ್ಧರಿಸಿದ್ದಾರೆ. ಅದರನ್ವಯ ಈ ಸಂಸ್ಥೆಯ ಮೇಲೆ ಅಪರಾಧ ಪ್ರಕರಣಗಳು, ಪ್ರಚೋಧನಾಕಾರಿ ಭಾಷಣಗಳು, ಹಣದ ವರ್ಗಾವಣೆ ಹಾಗೂ ಇತರೆ ಕಾನೂನು ಬಾಹಿರ ಚಟುವಟಿಗೆಗಳಲ್ಲಿ ಸಕ್ರಿಯವಾಗಿದೆ ಎಂಬ ಆರೋಪದ ಮೇಲೆ ಬೋಧಕ ಝಾಕೀರ್ ನಾಯಕ್ ಅವರ ಮೇಲೆ ಕ್ರಿಮಿನಲ್ ಮೊಕದ್ಧಮೆ ಹೂಡಲಾಗಿದೆ.
ಈ ಕುರಿತಾಗಿ ತನಿಖೆ ನಡೆಸಿದ್ದ ಮಹಾರಾಷ್ಟ್ರ ಪೊಲೀಸ್ ಹಾಗೂ ಗುಪ್ತಚರ ಸಂಸ್ಥೆಗಳು ಝಾಕೀರ್ ಅವರು ತಮ್ಮ ಎನ್‍ಜಿಓ ಸಂಸ್ಥೆಯಲ್ಲಿ ದೇಶ ವಿರೋಧಿ ಪ್ರಚೋದನಾಕಾರಿ ಭಾಷಣಗಳು ಹಾಗೂ ಯುವಕರಲ್ಲಿ ಭಯೋತ್ಪಾದನಾ ಸಂಸ್ಥೆಗಳತ್ತ ಹೆಚ್ಚು ಒಲವು ಮೂಡಿಸುವ ಕುರಿತು ಹೇಳಿಕೆ ನೀಡುತ್ತಿರುವುದು ಸಾಬೀತಾಗಿರುವ ಹಿನ್ನಲೆಯಲ್ಲಿ ಝಾಕೀರ್ ಅವರ ಸಂಸ್ಥೆಯು ನ್ಯಾಯಯುತವಲ್ಲದ ಸಂಸ್ಥೆ ಎಂದು ಆದೇಶ ಹೊರಡಿಸಿ ಐದು ವರ್ಷಗಳ ನಿಷೇಧ ಹೇರಿದೆ. ಇದರನ್ವಯ ಕೇಂದ್ರದ ಅನುಮತಿಯಿಲ್ಲದೇ ಈ ಸಂಸ್ಥೆ ಯಾವುದೇ ಕಾರ್ಯಕ್ರಮ ಅಥವಾ ಇನ್ನಿತರೆ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಂತಿಲ್ಲ ಎಂದು ಎಚ್ಚರಿಸಿದೆ.

Like us on Facebook  The New India Times

POPULAR  STORIES :

ಹುಚ್ಚಾ ವೆಂಕಟ್ ಮೇಲೆ ಕಿಚ್ಚ ಸುದೀಪ್ ಗರಂ..!

30ನಿಮಿಷ ಕೋಕಾ ಕೋಲದಲ್ಲಿ ಹೊಸ 2000ರೂ ನೋಟನ್ನು ಮುಳುಗಿಸಿದರೆ ಏನಾಗುತ್ತೆ ಗೊತ್ತಾ.?

ಬಿಗ್‍ಬಾಸ್ ಮನೆಯಲ್ಲಿ ಕಣ್ಣೀರಾಕಿದ ಕಿರಿಕ್ ಕೀರ್ತಿ..! ಕೀರ್ತಿ ಅಳುವಿಗೆ ಪ್ರಥಮ್ ಕಾರಣ…!

ಬಿಗ್‍ಬಾಸ್ ಮನೆಗೆ ಹುಚ್ಚ ವೆಂಕಟ್ ಎಂಟ್ರಿ

2000ರೂ ನೋಟಿನ ಕ್ವಾಲಿಟಿ ಟೆಸ್ಟ್ ಮಾಡಿದ ಯುವಕ : ವೈರಲ್ ಆಯ್ತು ವೀಡಿಯೋ

Share post:

Subscribe

spot_imgspot_img

Popular

More like this
Related

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ದಸರಾ ಸಂಭ್ರಮ: ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಮೈಸೂರು: ಸಾಂಸ್ಕೃತಿಕ...

ರಸ್ತೆ ಗುಂಡಿಗಳಿಂದ ಕಾಂಗ್ರೆಸ್ ಸರ್ಕಾರಕ್ಕೂ ಕೆಟ್ಟ ಹೆಸರು ಬಂದಿದೆ: ಸಚಿವ ರಾಮಲಿಂಗಾರೆಡ್ಡಿ

ರಸ್ತೆ ಗುಂಡಿಗಳಿಂದ ಕಾಂಗ್ರೆಸ್ ಸರ್ಕಾರಕ್ಕೂ ಕೆಟ್ಟ ಹೆಸರು ಬಂದಿದೆ: ಸಚಿವ ರಾಮಲಿಂಗಾರೆಡ್ಡಿ ಬೆಂಗಳೂರು:...

ಅಪ್ಪಿ-ತಪ್ಪಿಯೂ ದೇವರಿಗೆ ಪೂಜೆಯಲ್ಲಿ ಈ ತಪ್ಪು ಮಾಡ್ಬೇಡಿ: ಏನಾಗುತ್ತೆ ಗೊತ್ತಾ?

ಅಪ್ಪಿ-ತಪ್ಪಿಯೂ ದೇವರಿಗೆ ಪೂಜೆಯಲ್ಲಿ ಈ ತಪ್ಪು ಮಾಡ್ಬೇಡಿ: ಏನಾಗುತ್ತೆ ಗೊತ್ತಾ? ಹಿಂದೂ ಧರ್ಮದಲ್ಲಿ...